ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾವನ್ನು ಒಟ್ಟು 15 ದೇಶಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.
ಪುನೀತ್ ಕೊನೆ ಸಿನಿಮಾವನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸಲು ಪ್ರಯತ್ನ ಮಾಡಲಾಗುತ್ತಿದೆ. ಜೇಮ್ಸ್ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.
ಜೇಮ್ಸ್ ಜರ್ಮನಿ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ, ಪೋಲ್ಯಾಂಡ್, ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್ ರಿಲೀಸ್ ಆಗ್ತಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಜೇಮ್ಸ್ ಐದು ಭಾಷೆಗಳಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್ ಆಗಿದೆ. ಮಾರ್ಚ್ 17ಕ್ಕೆ ಏಕಕಾಲಕ್ಕೆ ಎಲ್ಲಾ ಭಾಷೆಯಲ್ಲೂ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರ ರಿಲೀಸ್‌ಗೆ ಕೆಲವೇ ದಿನಗಳು ಬಾಕಿ ಇದ್ದು, ಚಿತ್ರತಂಡ ಐದು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ.
ಜೇಮ್ಸ್ ಹೊಸ ಲುಕ್ ಫೋಟೋಗಳನ್ನು ಚಿತ್ರತಂಡ ರಿಲೀಸ್ ಮಾಡಿದೆ. ಅಪ್ಪು ಸೈನಿಕನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಜೇಮ್ಸ್ ರಿಲೀಸ್ ಗೆ ಅಭಿಮಾನಿಗಳು ಕೂಡ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಮೂಲಕ ವಿರೇಶ್ ಚಿತ್ರಮಂದಿರ ಹಾಗೂ ಅಪ್ಪು ಸಮಾಧಿ ಮೇಲೆ ಪುಷ್ಪಾಂಜಲಿ, ಥಿಯೇಟರ್ ಮುಂದೆ 30 ಸಿನಿಮಾದ ಅಪ್ಪು ಕಟ್‌ಔಟ್ ಅಳವಡಿಕೆ ಸೇರಿದಂತೆ ಹಲವು ಯೋಜನೆಗಳನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.
ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್.ಕುಮಾರ್ ಸಂಕಲನ ಇದೆ.
ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
__
Be the first to comment