ಮಾರ್ಚ್ 17ರಂದು ರಿಲೀಸ್ ಆಗುತ್ತಿರುವ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಭರ್ತಿ 4 ಸಾವಿರ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದು ಕನ್ನಡ ಚಿತ್ರರಂಗದಲ್ಲಿ ದಾಖಲೆ ಆಗಲಿದೆ.
ಕರ್ನಾಟಕದಲ್ಲೂ ಸುಮಾರು 400ಕ್ಕೂಅಧಿಕ ಚಿತ್ರಮಂದಿರಗಳಲ್ಲಿ ಜೇಮ್ಸ್ ಬಿಡುಗಡೆಯಾಗಲಿದೆ. ಒಂದು ವಾರ ಈ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್ ರಾಜ್‌ಕುಮಾರ್‌ಗೆ ಗೌರವ ಸಲ್ಲಿಸಲಾಗುತ್ತಿದೆ. ಪ್ರತಿ ಚಿತ್ರಮಂದಿರದ ಮುಂದೆ ಅಭಿಮಾನಿಗಳು ‘ಜೇಮ್ಸ್’ ಜಾತ್ರೆ ಮಾಡಲಿದ್ದಾರೆ. ಈಗಾಗಲೇ ಯೂರೋಪ್‌ನಲ್ಲಿ ರಿಲೀಸ್ ಆಗುತ್ತಿರುವ ಚಿತ್ರಮಂದಿರಗಳ ಪಟ್ಟಿ ರಿಲೀಸ್ ಆಗಿದೆ.
ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಬೆಂಗಳೂರಿನ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಸಂಭ್ರಮಿಸಲು ಸಜ್ಜಾಗಿದ್ದಾರೆ. ಬೆಳಗಿನ ಜಾವದಿಂದ ಸಿನಿಮಾದ ಸ್ಪೆಷಲ್ ಶೋಗಳು ಆರಂಭ ಆಗಲಿವೆ. ಚಿತ್ರಮಂದಿರಲ್ಲಿ ಎ ಸಾಲಿನಲ್ಲಿ 17ನೇ ಸೀಟ್ ನಂಬರ್ ನ್ನು ಅಪ್ಪುಗಾಗಿ ಮೀಸಲಿಟ್ಟಿದ್ದಾರೆ. ಪುನೀತ್ ರಾಜ್‌ಕುಮಾರ್ 17ನೇ ಸೀಟ್‌ನಲ್ಲಿ ಫ್ಯಾನ್ಸ್ ಜೊತೆ ಕೂತು ತಮ್ಮ ಸಿನಿಮಾವನ್ನು ನೋಡುತ್ತಾರೆ ಎಂದು ನಂಬಿದ್ದಾರೆ. ಈ ಕಾರಣಕ್ಕೆ ಒಂದು ಸೀಟ್ ನ್ನು ಮೀಸಲಿರಿಸಲಾಗಿದೆ.
ಬೆಂಗಳೂರಿನ ಕಮಲಾನಗರದಲ್ಲಿರುವ ವೀರಭದ್ರೇಶ್ವ ಚಿತ್ರಮಂದಿರದಲ್ಲಿ ಅಭಿಮಾನಿಗಳು ಬೃಹತ್ ಕಟೌಟ್‌ಗಳನ್ನು ಹಾಕಲಿದ್ದಾರೆ. ಡಾ. ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಕಟೌಟ್‌ಗಳನ್ನು ನಿಲ್ಲಿಸಲಾಗುವುದು. ಬೆಳಗ್ಗೆಯಿಂದಲೇ ಚಿತ್ರಮಂದಿರಕ್ಕೆ ಬರುವ ಅಭಿಮಾನಿಗಳಿಗೆ ಕಾಫಿ, ಟೀ, ಬಿಸ್ಕೆಟ್, ಮಸಾಲ ದೋಸೆ, ಚಿಕಿನ್ ಬಿರಿಯಾನಿ, ಸಮೋಸ ಟೀ, ಗೋಬಿ ಮಂಚೂರಿ ನೀಡಲಾಗುವುದು.
ಜೇಮ್ಸ್’ಗೆ ಸೆನ್ಸಾರ್ ಬೋರ್ಡ್ ಯು / ಎ ಸರ್ಟಿಫಿಕೇಟ್ ನೀಡಿದೆ. ಈಗಾಗಲೇ ಮೊದಲ ಹಂತದ ಥಿಯೇಟರ್ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರುವ ‘ಜೇಮ್ಸ್’ಗೆ ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪ್ರಿಯಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಮೊದಲಾದವರು ಬಣ್ಣಹಚ್ಚಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ರಿಲೀಸ್ ಆಗಲಿದೆ.
ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್.ಕುಮಾರ್ ಸಂಕಲನ ಇದೆ.
ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
__
Be the first to comment