ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ.
ಚಿತ್ರದ ಟಾಕಿ ಪೋಷನ್ ಶೂಟಿಂಗ್ ಬಾಕಿ ಇತ್ತು. ಪುನೀತ್ ಇಲ್ಲದೇ ಚಿತ್ರೀಕರಣವನ್ನು ಚಿತ್ರತಂಡ ಶುರು ಮಾಡಿದೆ. ಪುನೀತ್ ಇಲ್ಲದೆ ಚಿತ್ರೀಕರಣ ಮತ್ತೆ ಆರಂಭ ಮಾಡಿದ್ದಕ್ಕೆ ಕಥೆಯಲ್ಲಿ ಏನಾದರೂ ಬದಲಾವಣೆ ಆಗಿದೆಯಾ ಎನ್ನುವ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.
ಪುನೀತ್ ಹುಟ್ಟುಹಬ್ಬದ ದಿನವಾದ ಮಾರ್ಚ್ 17ಕ್ಕೆ ‘ಜೇಮ್ಸ್’ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರದ ಸ್ಯಾಟಲೈಟ್ ಹಕ್ಕುಗಳು ಈಗಾಗಲೇ 15 ಕೋಟಿಗೆ ಮಾರಾಟವಾಗಿದೆ ಎಂದು ತಿಳಿದು ಬಂದಿದೆ.
‘ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚೇತನ್ ನಿರ್ದೇಶನದ ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್.ಕುಮಾರ್ ಸಂಕಲನ ಇದೆ.
ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ. ಪುನೀತ್ ರಾಜ್ ಕುಮಾರ್ ನಟನೆಯ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಪುನೀತ್ ಅವರಿಗೆ ಯಾರು ಧ್ವನಿ ನೀಡುತ್ತಾರೆ ಎನ್ನುವ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
___
Be the first to comment