ಬೆಂಗಳೂರು : ಪದ್ಮ ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು. ಅದನ್ನು ಉಳಿಸಿಕೊಳ್ಳಲು ನಾನು ಪ್ರಯತ್ನ ಪಡ್ತೇನೆ” ಎಂದು ಹಿರಿಯ ನಟ ಅನಂತನಾಗ್ ಅವರು ತಮಗೆ ಪದ್ಮ ಪ್ರಶಸ್ತಿ ನೀಡುವ ಬಗ್ಗೆ ನಡೆಯುತ್ತಿರುವ ಆಂದೋಲನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
“ನನಗೆ ಪ್ರಶಸ್ತಿ ಸಿಕ್ಕರೆ ಖುಷಿ ಆಗುತ್ತದೆ. ಅದು ಒಂದು ದಿನ ಮಾತ್ರ. ನಂತರ ಈ ಪ್ರಶಸ್ತಿ ಶೋಕೇಸ್ ಸೇರುತ್ತದೆ. ಈ ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು ” ಎಂದಿದ್ದಾರೆ.
ಅನಂತನಾಗ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಟ್ವೀಟರ್ ನಲ್ಲಿ ಅಭಿಯಾನ ನಡೆಯುತ್ತಿದೆ. ನಿರ್ದೇಶಕ ರಿಷಬ್ ಶೆಟ್ಟಿ, ನಟರಾದ ರಕ್ಷಿತ್ ಶೆಟ್ಟಿ, ಪುನೀತ್ ರಾಜ್ಕುಮಾರ್ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ.
” ಅನಂತನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂಬುದು ನಮ್ಮೆಲ್ಲರ ಆಸೆ. ನಾನು ಅವರ ದೊಡ್ಡ ಅಭಿಮಾನಿ. ಸಿನಿಮಾ ರಂಗಕ್ಕೆ ಅನಂತನಾಗ್ ಕೊಡುಗೆ ಅಪಾರ’ ಎಂದು ಪುನೀತ್ ರಾಜಕುಮಾರ್ ಹೇಳಿದ್ದಾರೆ.
“ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಪ್ರಶಸ್ತಿ ನೀಡಬೇಕೆಂಬ ಈ ಪ್ರಯತ್ನದಲ್ಲಿ ನಾವೆಲ್ಲರೂ ಒಂದಾಗಿ ಕೈ ಜೋಡಿಸೋಣ. ಈ ಮಾಹಿತಿಯನ್ನು ಇಂದಿನಿಂದಲೇ ಹೆಚ್ಚೆಚ್ಚು ಜನರಿಗೆ ಹಂಚುವ ಕೆಲಸ ಆಗಬೇಕು” ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.
1973ರಲ್ಲಿ ‘ಸಂಕಲ್ಪ’ ಚಿತ್ರದ ಮೂಲಕ ಅನಂತ್ ನಾಗ್ ಚಿತ್ರರಂಗಕ್ಕೆ ಕಾಲಿಟ್ಟರು. ಅವರು 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದು ಈಗಲೂ ಬಲು ಬೇಡಿಕೆಯ ಪೋಷಕ ನಟರಾಗಿದ್ದಾರೆ.
Be the first to comment