ಲಾಕ್ ಡೌನ್ ಮುಗಿದ ಮೇಲೆ ಚಂದನವನದಲ್ಲಿ ಹೊಸ ಚಿತ್ರಗಳು ಒಂದರಿಂದ ಒಂದು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ.ಇದೇ ಸಾಲಿನಲ್ಲಿ ವಸಿಷ್ಠ ಸಿಂಹ ಅಭಿನಯದ ನೂತನ ಚಿತ್ರವೊಂದು ಇದೇ ತಿಂಗಳ ಕೊನೆಯಲ್ಲಿ ಆರಂಭಾವಗಲಿದೆ.
ಚಿತ್ರದ ಶೀರ್ಷಿಕೆ ಗೌಪ್ಯವಾಗಿಟಿರುವ ಚಿತ್ರತಂಡ ಮಾಸಾಂತ್ಯಕ್ಕೆ ಮುಹೂರ್ತ ನಡೆಸಿ, ಚಿತ್ರದ ಶೀರ್ಷಿಕೆ ಅನಾವರಣಗೊಳಿಸುವುದಾಗಿ ತಿಳಿಸಿದೆ.ಜನರತ್ನ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜನಾರ್ದನ ವಿ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವಚನ್ ನಿರ್ದೇಶಿಸುತ್ತಿದ್ದಾರೆ.
ನಿರ್ದೇಶಕ ಪವನ್ ಕುಮಾರ್ ಜೊತೆಗೆ ‘ಲೂಸಿಯಾ’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ವಚನ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.ಅನೂಪ್ ಸೀಳಿನ್ ಸಂಗೀತವಿರುವ ಈ ಚಿತ್ರಕ್ಕೆ ‘ಮಫ್ತಿ’ ಖ್ಯಾತಿಯ ನವೀನ್ ಕುಮಾರ್ ಐ ಛಾಯಾಗ್ರಹಣವಿದೆ. ‘ಟಗರು’ ಖ್ಯಾತಿಯ ಮಾಸ್ತಿಅವರು ಸಂಭಾಷಣೆ ಬರೆಯುತ್ತಿದ್ದಾರೆ.
ಹರೀಶ್ ಕೊಮ್ಮೆ ಅವರ ಸಂಕಲನವಿರುವ ಈ ಚಿತ್ರಕ್ಕಿದೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಖ್ಯಾತ ನಟ ಕಿಶೋರ್ ಕೂಡ ಕಾಣಿಸಿಕೊಳುತ್ತಿದ್ದಾರೆ. ಸಾಕಷ್ಟು ಪ್ರಸಿದ್ದ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಸದ್ಯದಲ್ಲೇ ತಿಳಿಸಲಾಗುವುದು.

Written & Directed by VACHAN

Producer JANARDHAN V

Be the first to comment