ತಮಿಳು ನಟ ವಿಜಯ್ ಸಿಎಂ ಆದ ಬೆನ್ನಲ್ಲೇ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂ. ಎನ್ಟಿಆರ್ ರಾಜಕೀಯಕ್ಕೆ ಬರುವ ಸುಳಿವನ್ನು ನೀಡಿದ್ದಾರೆ.
ಹುಟ್ಟುಹಬ್ಬದಂದು ದೊಡ್ಡ ಕಾರ್ಯವೊಂದಕ್ಕೆ ಜೂ. ಎನ್ಟಿಆರ್ ಕೈ ಹಾಹಾಕಿದ್ದಾರೆ. ಅವರು ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಂದು ಅಭಿಮಾನಿಗಳ ಸಂಘಗಳ ನೆರವಿನೊಂದಿಗೆ ದೊಡ್ಡ ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ್ದಾರೆ. ಆ ದಿನ ತಮ್ಮ ಹೆಸರಲ್ಲಿ 100 ಕೋಟಿ ಮೌಲ್ಯದ ‘ಸೋಷಿಯಲ್ ವೆಲ್ಫೇರ್ ಫಂಡ್’ ಸೃಷ್ಟಿಸಲು ಮುಂದಾಗಿದ್ದಾರೆ. ಈ ವೆಲ್ಫೇರ್ ಫಂಡ್ ಮೂಲಕ ತೆಲುಗು ರಾಜ್ಯಗಳಲ್ಲಿ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ.
ಇದರ ಹಿಂದೆ ರಾಜಕೀಯ ಮಹತ್ವಾಕಾಂಕ್ಷೆ ಇದೆ ಎನ್ನಲಾಗುತ್ತಿದೆ.
ಜೂ. ಎನ್ಟಿಆರ್ ಟಿಡಿಪಿಯ ಸ್ಟಾರ್ ಪ್ರಚಾರಕರಾಗಿಯೂ ಕೆಲಸ ಮಾಡಿದ್ದಾರೆ. ಅವರನ್ನು ಪಕ್ಷದ ಆಸ್ತಿಯೆಂದು ಚಂದ್ರಬಾಬು ನಾಯ್ಡು ಬಣ್ಣಿಸಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಪಕ್ಷದ ಮುಖಂಡರಾದ ಚಂದ್ರಬಾಬು ನಾಯ್ಡು ಮತ್ತು ನಂದಮೂರಿ ಬಾಲಕೃಷ್ಣ ಅವರುಗಳು ಜೂ ಎನ್ಟಿಆರ್ ಅವರನ್ನು ಪಕ್ಷದಿಂದ ದೂರ ಇರಿಸಿದ್ದಾರೆ. ಈ ಕಾರಣದಿಂದ ಅವರು ತಮ್ಮದೇ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜೂ ಎನ್ಟಿಆರ್ ಭಾರಿ ಅಭಿಮಾನಿಗಳನ್ನು ಹೊಂದಿರುವ ನಟ ಆಗಿದ್ದು ರಾಜಕೀಯ ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.





Be the first to comment