ಅಸ್ಸಾಂದ ಪ್ರಸಿದ್ಧ ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ ಆಗಿದೆ.
ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಸೆಪ್ಟೆಂಬರ್ 21ರಂದು ಗುವಾಹಟಿಯಲ್ಲಿ ನೆರವೇರಿತು. ಈ ವೇಳೆ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ ಇದು ವಿಶ್ವದಲ್ಲೇ 4ನೇ ಅತಿದೊಡ್ಡ ಅಂತಿಮ ಯಾತ್ರೆ ಆಗಿ ದಾಖಲಾಗಿದೆ.
ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಹಾಗೂ ರಾಣಿ ಎಲಿಜಬೆತ್ ಅವರಿಗೆ ನೀಡಿದ ವಿದಾಯದ ನಂತರದ ಸ್ಥಾನ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಪಡೆದಿದೆ. . ಕಿಂಗ್ ಆಫ್ ಹಮ್ಮಿಂಗ್ ಎಂದಲೇ ಹೆಸರು ಪಡೆದಿದ್ದ ಇವರ ಅಂತಿಮ ಯಾತ್ರೆ ಅಸ್ಸಾಮಿ ಸಂಗೀತ ಯುಗದ ಅಂತ್ಯವೆಂಬಂತೆ ಕಾಣುತ್ತಿತ್ತು.
ಜುಬೀನ್ ಗಾರ್ಗ್ ಅಂತಿಮ ಯಾತ್ರೆ ವೇಳೆ ಜನಸಾಗರವೇ ಹರಿದು ಬಂದಿತ್ತು. ಅಭಿಮಾನಿಗಳು ಕಿಕ್ಕಿರಿದು ಕೊನೆ ಬಾರಿ ಅವರ ಮುಖವನ್ನು ನೋಡಲು ಕಾಯುತ್ತಿದ್ದರು. ಮೆರವಣಿಗೆಯಲ್ಲಿ ಅವರ ಹಾಡುಗಳ ಸುರಿಮಳೆಯೇ ಸುರಿಯುತ್ತಿತ್ತು.
ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ತಮ್ಮ ಹೆಸರನ್ನು ಅಚ್ಚಳಿಯಂತೆ ಮಾಡಿದ್ದಾರೆ. 1972ರಲ್ಲಿ ಜನಿಸಿದ ಗಾರ್ಗ್ ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾಗ ಜುಬೀನ್ ಗಾರ್ಗ್ ಅವರು ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
—–





Be the first to comment