ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿ ‘ಜುಗಾರಿ ಕ್ರಾಸ್’ ಬೆಳ್ಳಿ ಪರದೆ ಮೇಲೆ ಬರಲು ಸಿದ್ಧವಾಗುತ್ತಿದೆ.
ನಿರ್ದೇಶಕ ಗುರುದತ್ತ ಗಾಣಿಗ ಅವರು ಜುಗಾರಿ ಕ್ರಾಸ್ ನ್ನು ಬೆಳ್ಳಿ ಪರದೆ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅನೇಕ ನಿರ್ದೇಶಕರು ಜುಗಾರಿ ಕ್ರಾಸ್‌ಗೆ ಜೀವ ತುಂಬಲು ಪ್ರಯತ್ನಿಸಿದ್ದಾರೆ. ಇದೀಗ ಗುರುದತ್ ಗಾಣಿಗ ಮತ್ತು ರಾಜ್ ಬಿ ಶೆಟ್ಟಿ ಬಹುದಿನಗಳ ಕನಸನ್ನು ನನಸು ಮಾಡುತ್ತಿರುವುದು ಚಿತ್ರಪ್ರೇಮಿಗಳಲ್ಲಿ ಉತ್ಸಾಹ ಮೂಡಿಸಿದೆ. ಚಿತ್ರದ ಸಸ್ಪೆನ್ಸ್ ಪ್ರಪಂಚದ ಬಗ್ಗೆ ಸುಳಿವು ನೀಡುವ ಟೀಸರ್ ಬಿಡುಗಡೆಯಾಗಿದೆ. ಟೀಸರ್ ತಲೆಬರುಡೆಗಳನ್ನು ತೋರಿಸಿದ್ದು, ತೀವ್ರ ನಿರೀಕ್ಷೆ ಹುಟ್ಟುಹಾಕುವಂತಿದೆ. ಜುಗಾರಿ ಕ್ರಾಸ್ ಕಾದಂಬರಿ ಅದರ ಸಸ್ಪೆನ್ಸ್ ನಿರೂಪಣೆ, ಒಳಸಂಚು ಮತ್ತು ಅಪಾಯದ ತಿರುವುಗಳಿಗೆ ಹೆಸರುವಾಸಿಯಾಗಿದೆ.
ಗುರುದತ್ ಅವರು ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಸದ್ಯ ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಕರಾವಳಿಯಲ್ಲಿಯೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.
ಜುಗಾರಿ ಕ್ರಾಸ್ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮತ್ತು ಸಚಿನ್ ಬಸ್ರೂರ್ ಅವರ ಸಂಗೀತವಿದೆ. ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ತಾರಾಗಣದ ಬಗ್ಗೆ ಪ್ರಕಟಣೆ ನಿರೀಕ್ಷಿಸಲಾಗಿದೆ.
—–





Be the first to comment