“ಜ್ಯೂಲಿಯೆಟ್ 2” ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಜ್ಯುಲಿಯೆಟ್ 2″ PL production ಲಾಂಛನದಡಿಯಲ್ಲಿ ನಿರ್ಮಾಣವಾಗಿದೆ. ಪ್ರೇಮ್ ಅಭಿನಯದ “ಪ್ರೇಮ ಪೂಜ್ಯಂ” ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ “ಜ್ಯೂಲಿಯೆಟ್ 2” ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ವಿರಾಟ್ ಅವರದ್ದು. ಲಿಖಿತ್ ಆರ್ ಕೋಟ್ಯಾನ್ ನಿರ್ಮಿಸಿರುವ ಈ ಚಿತ್ರದ ಚಿತ್ರೀಕರಣ ಮುಗಿದಿದೆ. ಮಂಗಳೂರು, ಬೆಳ್ತಂಗಡಿ ಹಾಗೂ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆದಿದೆ.
ನಗರವಾಸಿಯಾದ ಮಗಳು, ತನ್ನ ತಂದೆಯ ಕೊನೆಯ ಆಸೆ ಈಡೇರಿಸಲು ಹುಟ್ಟೂರಿಗೆ ಹೋಗಿ ನೆಲೆಸುತ್ತಾಳೆ. ಅಲ್ಲಿ ಏನೆಲ್ಲಾ ಆಗುತ್ತದೆ ಎನ್ನುವುದು ಇಲ್ಲಿದೆ. ಹೆಣ್ಣು ಶಾಂತರೂಪಿಯಾದ ಶಾರದೆಯ ರೀತಿ ಇರುತ್ತಾಳೆ. ಆದರೆ ತನಗೆ ತೊಂದರೆಯಾದಾಗ ಆಕೆ ದುರ್ಗೆಯೂ ಆಗುತ್ತಾಳೆ ಎಂಬುದು ಈ ಚಿತ್ರದ ಕಥಾಹಂದರ ಆಗಿದೆ.
ಬೃಂದಾ ಆಚಾರ್ಯ, ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಚಿನ್ ಬಸ್ರೂರ್ ಅವರ ಹಿನ್ನೆಲೆ ಸಂಗೀತ, ಸ್ಯಾಂಟೋ ವಿ ಆಂಟ್ಟೋ ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಆಗಿದೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮೊದಲು “ಜ್ಯೂಲಿಯೆಟ್ 2” ಫೆಬ್ರವರಿ ವೇಳೆಗೆ ತೆರೆಗೆ ಬರಲಿದೆ. ನಂತರ ಮೊದಲ ಭಾಗ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ವಿರಾಟ್ ತಿಳಿಸಿದ್ದಾರೆ.
https://youtu.be/vik46wS_pVI
__

Be the first to comment