ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಅನ್ನು ಪ್ರಾರಂಭಿಸಿದ್ದು, ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಮತ್ತು ಶೃತಿ ಕಿರಣ್ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್ ಲಾಂಚ್ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್ ಲಾಂಚ್ ಟೀಸರ್ ಲಾಂಚ್ ಮಾಡಿದರು. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುನೀತಾ ಗೌಡ, ಸ್ಫೂರ್ತಿ ವಿಶ್ವಾಸ್ ಉಪಸ್ಥಿತರಿದ್ದರು.
ಬಳಿಕ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ನಾವು ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಈ ಕಲಿಕೆಯ ಗುರಿ ಜೊತೆಗೆ ಪ್ರತೀ ಮಗುವಿನ ಸಾಮರ್ಥ್ಯವನ್ನು ಪೋಷಿಸುವುದು ಮತ್ತು ನಾಯಕತ್ವವನ್ನೂ ನಿರ್ಮಿಸುವುದು ನಮ್ಮ ಉದ್ದೇಶ ಎಂದರು .
ನಟಿ ಮಿಲನಾ ನಾಗರಾಜ್ ಮಾತನಾಡಿ, ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಹೆಸರು ಬಹಳ ಮುದ್ದಾಗಿದೆ. ಇಂದಿನ ಮಕ್ಕಳಿಗೆ ಇದು ಒಳ್ಳೆಯ ಅವಕಾಶ. ನಾವು ಮಕ್ಕಳಾದ ಏನಾಗಬೇಕು ಅಂದಾಗ ಹೇಳಲು ಗೊತ್ತಿರಲಿಲ್ಲ. ಆದರೆ ಇಂದಿನ ಮಕ್ಕಳು ಆಗಲ್ಲ. ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸುವುದು ಅತ್ಯುತ್ತಮ. ಇದು ಆರಂಭವಾಷ್ಟೇ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ಸ್ಫೂರ್ತಿ ವಿಶ್ವಾಸ್ ಮಾತನಾಡಿ, ಇದೊಂದು ದೊಡ್ಡ ಜವಾಬ್ದಾರಿ. ಅದಕ್ಕೆ ಕಾರಣ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮೇಡಂ. ದಿನ, ರಾತ್ರಿ ಇದಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಹೆಸರಿಗಾಗಿ ಅಲ್ಲ. ಅಪ್ಪು ಸರ್ ಹೆಸರನ್ನು ಉಳಿಸಲು. ಆ ಜವಾಬ್ದಾರಿ ಇಟ್ಟುಕೊಂಡು ಇದನ್ನು ನಡೆಸಿಕೊಂಡು ಹೋಗುತ್ತವೆ. ಈ ಶಾಲೆ ಮಕ್ಕಳು ಅತ್ಯುತ್ತಮ ನಾಗರೀಕರಾಗುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಸುನೀತಾ ಗೌಡ ಮಾತನಾಡಿ, ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಕೇಂದ್ರಗಳು ಮಕ್ಕಳನ್ನು ಧೈರ್ಯದಿಂದ ಕನಸು ಕಾಣಲು, ಸೃಜನಾತ್ಮಕವಾಗಿ ಯೋಚಿಸಲು ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಲು ಸಬಲೀಕರಣಗೊಳಿಸುತ್ತವೆ. ನಾವು ಪ್ರತಿ ಮಗುವನ್ನು ಸಾಧಕನನ್ನಾಗಿ ಬೆಳೆಸುವುದು, ನಾಯಕತ್ವದ ಗುಣಗಳು, ಸಾಂಸ್ಕೃತಿಕ ಮೌಲ್ಯಗಳು ಮತ್ತು ಜವಾಬ್ದಾರಿಯುತ ಪೌರತ್ವವನ್ನು ಉತ್ತೇಜಿಸುವತ್ತ ಗಮನ ಹರಿಸುತ್ತೇವೆ ಎಂದು ತಿಳಿಸಿದರು.
ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಕ್ರಾಂತಿಕಾರಿ, ಪ್ರಾಥಮಿಕ ಶಿಕ್ಷಣ ಯೋಜನೆ, ಮಕ್ಕಳ ಕಲಿಕೆ ಮತ್ತು ಬೆಳವಣಿಗೆಗೆ ಹೊಸ ದಾರಿ ನಿರ್ಮಿಸಲು ಸಜ್ಜಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ಖ್ಯಾತ ಶಿಕ್ಷಣತಜ್ಞೆ ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್ ಹಾಗೂ ಶೃತಿ ಕಿರಣ್ ಸಂಸ್ಥಾಪಿಸಿರುವ ಈ ಶಾಲೆಯೂ ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮದೊಂದಿಗೆ ಜೂನ್‌ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸುತ್ತಿದೆ.
ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮ ಈ ಜೂನಿಯರ್ ಟೋಸ್ ಪ್ರಿಸ್ಕೂಲ್‌ನಲ್ಲಿ ಇರಲಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ನಾಯಕತ್ವ, ಸೃಜನಶೀಲತೆ ಹಾಗೂ ಉದ್ಯಮಶೀಲತೆಯ ಚಿಂತನೆಯನ್ನು ಬೆಳೆಸುವುದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಜೊತೆಗಾರರ ಕನಸು. ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಪೂರ್ತಿ ವಿಶ್ವಾಸ್ ಅವರು ತಮ್ಮ ಅನುಭವದೊಂದಿಗೆ ಮುಂದಿನ ತಲೆಮಾರಿನ ಆತ್ಮವಿಶ್ವಾಸಿ ಯುವ ನಾಯಕರಿಗೆ ಸ್ಫೂರ್ತಿ ನೀಡಲು ಕೈಜೋಡಿಸಿದ್ದಾರೆ.
ಈ ಪ್ರೀಸ್ಕೂಲ್ ಬೆಂಗಳೂರು ಹಾಗೂ ಮೈಸೂರಿನಲ್ಲಿ ಆರಂಭವಾಗಿದೆ. ಇದರಲ್ಲಿ ಆಧುನಿಕ ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ತಜ್ಞರು ಸೇರಿ ಸಿದ್ಧಪಡಿಸಿದ ವಿನೂತನವಾದ ಪಠ್ಯಕ್ರಮಗಳನ್ನು ಅಳವಡಿಸಲಾಗಿದೆ. ಎರಡು ವರ್ಷದಿಂದ ಆರು ವರ್ಷದ ಮಕ್ಕಳಿಗೆ ಇಲ್ಲಿ ಶಿಕ್ಷಣವನ್ನು ನೀಡಲಾಗುತ್ತೆ.
ಸದ್ಯ ಬೆಂಗಳೂರಿನಲ್ಲಿ ಆರಂಭವಾದ ಈ ಶಿಕ್ಷಣ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ವಿಸ್ತರಣೆ ಮಾಡುವ ಆಲೋಚನೆಯನ್ನು ಇಟ್ಟುಕೊಂಡಿದ್ದಾರೆ. ಈ ಮೂಲಕ ಇಂತಹ ವಿನೂತನ ಶಿಕ್ಷಣ ಭಾರತದಾದ್ಯಂತ ಇರುವ ಎಲ್ಲಾ ಮಕ್ಕಳಿಗೂ ಸಿಗುವಂತೆ ಆಗಬೇಕು ಎಂಬುದು ಇವರ ಆಶಯ.

Be the first to comment