ಫೆಬ್ರವರಿ 9ರಂದು ಜಸ್ಟ್ ಪಾಸ್” ಬಿಡುಗಡೆ

ವಿಭಿನ್ನ ಕಥಾಹಂದರ ಹೊಂದಿರುವ “ಜಸ್ಟ್ ಪಾಸ್” ಚಿತ್ರ ಫೆಬ್ರವರಿ 9ರಂದು ಬಿಡುಗಡೆಯಾಗುತ್ತಿದೆ.

ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ಟ್ರೇಲರ್ ನ್ನು ನಿರ್ಮಾಪಕರ ತಾಯಿ ಪ್ರೇಮ ಬಿಡುಗಡೆ ಮಾಡಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲೇ ಚಿತ್ರದ “ನೋಡಿದ ಕೂಡಲೆ” ಎಂಬ ಸುಮಧುರ ಹಾಡನ್ನು ಪ್ರದರ್ಶಿಸಲಾಯಿತು.

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಕೆ.ಎಂ.ರಘು, ಚಿತ್ರ ಇಷ್ಟು ಅದ್ದೂರಿಯಾಗಿ ಬರಲು ನಿರ್ಮಾಪಕ ಕೆ.ವಿ.ಶಶಿಧರ್ ಕಾರಣ. ಯಾವುದೇ ಕೊರತೆ ಇಲ್ಲದೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರಿಗೂ ನಾನು ಈ ಸಮಯದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು.

ಟ್ರೇಲರ್ ನೋಡಿದ ಮೇಲೆ ಬಹಳ ಖುಷಿಯಾಯಿತು. ಚಿತ್ರ ಚೆನ್ನಾಗಿ ಬಂದಿದೆ. ಫೆಬ್ರವರಿ 9ರಂದು ಬಿಡುಗಡೆಯಾಗುತ್ತಿದೆ. ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಕೆ.ವಿ.ಶಶಿಧರ್.

ನಾಯಕ ಶ್ರೀ, ನಾಯಕಿ ಪ್ರಣತಿ, .ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಛಾಯಾಗ್ರಾಹಕ ಸುಜಯ್ ಕುಮಾರ್, ಹಾಡು ಬರೆದಿರುವ ಪ್ರಮೋದ್ ಮರವಂತೆ, ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ಚಿತ್ರದ ಕುರಿತು ಮಾತನಾಡಿದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!