“ಕಬ್ಜ” ಟೀಸರ್ ಲಾಂಚ್ ಮುಂದಕ್ಕೆ ಹಾಕಿರುವುದಾಗಿ ನಿರ್ದೇಶಕ ಚಂದ್ರು ಹೇಳಿದ್ದಾರೆ.
ಈಗಾಗಲೇ ಭಾರತದಾದ್ಯಂತ ಸಂಚಲನ ಮೂಡಿಸಿರುವ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದ ಟೀಸರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡುತ್ತೇನೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದ್ದರು. ಅಷ್ಟರಲ್ಲಿ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ಸುದ್ದಿಗೆ ಇಡೀ ಕರುನಾಡು ಮಂಕಾಯಿತು. ನಮ್ಮ ಕಬ್ಜ ತಂಡಕ್ಕೂ ಅಪ್ಪು ಅವರ ಅಗಲಿಕೆ ಬಹಳ ನೋವು ತಂದಿದೆ ಎಂದು ಚಂದ್ರು ತಿಳಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಮಾಡಿ ಸಂಭ್ರಮಿಸುವುದು ಸರಿಯಲ್ಲ ಎಂಬ ಉದ್ದೇಶದಿಂದ “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಟೀಸರ್ ಲಾಂಚ್ ಮಾಡಲಾಗುವುದು ಎಂದು ಈ ಬಗ್ಗೆ ಟ್ವಿಟರ್ ಮೂಲಕ ಸಿನಿಪ್ರೇಕ್ಷಕರಿಗೆ ಆರ್ ಚಂದ್ರು ತಿಳಿಸಿದ್ದಾರೆ.
ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ, ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಇದ್ದಾರೆ.
ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್,ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಈಗಾಗಲೇ ಸಿನಿಮಾ ಪ್ರಿಯರ ಗಮನ ಸೆಳೆದಿದೆ.
Be the first to comment