ಸೆಪ್ಟೆಂಬರ್ 18ಕ್ಕೆ ಬಹುನಿರೀಕ್ಷಿತ ‘ಕಬ್ಜ’ ಟೀಸರ್ ರಿಲೀಸ್ ಆಗಲಿದೆ.
ನಿರ್ದೇಶಕ ಆರ್ ಚಂದ್ರು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಸಂಭ್ರಮದ ಜೊತೆ ‘ಕಬ್ಜ’ ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ.
ಕಬ್ಜ’ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ಕಿಚ್ಚ ಸುದೀಪ್ ಕೂಡ ಬಣ್ಣ ಹಚ್ಚಿದ್ದಾರೆ. ‘ಮುಕುಂದ ಮುರಾರಿ’ ನಂತರ ಇಬ್ಬರು ಒಟ್ಟಿಗೆ ನಟಿಸಿರುವುದು ಕುತೂಹಲ ಮೂಡಿಸಿದೆ. ಬಹುಕೋಟಿ ವೆಚ್ಚದ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಭಾರ್ಗವ್ ಭಕ್ಷಿ ಎನ್ನುವ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿದ್ದಾರೆ. ಸಿನಿಮಾ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುವಾಗಿದೆ.
ಆರ್. ಚಂದ್ರು ಎರಡು ಭಾಗಗಳಾಗಿ ಚಿತ್ರವನ್ನು ಕಟ್ಟಿಕೊಡಲಿದ್ದಾರೆ. ಚಿತ್ರದಲ್ಲಿ ಕಬೀರ್ ದುಹಾನ್ ಸಿಂಗ್ ಮತ್ತು ಕೋಟಾ ಶ್ರೀನಿವಾಸ ರಾವ್ , ಜಯ ಪ್ರಕಾಶ್, ಕಾಟ್ ರಾಜು ಮತ್ತು ಸುಬ್ಬರಾಜು ನಟಿಸಿದ್ದಾರೆ.
‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಚಿತ್ರಕ್ಕಾಗಿ 18ಕ್ಕೂ ಅಧಿಕ ಸೆಟ್‌ಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರು, ಸಂಡೂರು ಸೇರಿದಂತೆ ಹಲವು ಕಡೆಗಳಲ್ಲಿ ‘ಕಬ್ಜ’ ಚಿತ್ರೀಕರಣ ನಡೆದಿದೆ.
ಒಟ್ಟು 7 ಭಾಷೆಗಳಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಉಪ್ಪಿ ಗ್ಯಾಂಗ್‌ಸ್ಟರ್ ಆಗಿ ನಟಿಸಿದ್ದಾರೆ. 200 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಶ್ರೇಯಾ ಶರಣ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ.
____






Be the first to comment