ಕಬ್ಜ ಚಿತ್ರದ ಟೀಸರ್ ಸೆಪ್ಟೆಂಬರ್ 17ರಂದು ಸಂಜೆ 5.04 ನಿಮಿಷಕ್ಕೆ ರಿಲೀಸ್ ಆಗಲಿದೆ.
ಆರ್ ಚಂದ್ರು ನಿರ್ದೇಶನದ ಬಹು ತಾರಾಗಣದ ಈ ಚಿತ್ರ ಸಾಕಷ್ಟ ನಿರೀಕ್ಷೆಯನ್ನು ಉಂಟು ಹಾಕಿದೆ. ಈ ಚಿತ್ರದಲ್ಲಿ ಉಪೇಂದ್ರ ಹಾಗೂ ಸುದೀಪ್ ನಟಿಸಿದ್ದಾರೆ.
ಈ ಸಿನಿಮಾವನ್ನು ಆರ್. ಚಂದ್ರು ಅವರು ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದಾರೆ. ರವಿ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.
ಎಂ.ಟಿ.ಬಿ ನಾಗರಾಜ್ ಅವರು ‘ಕಬ್ಜ’ ಚಿತ್ರ ಅರ್ಪಿಸುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ಅವರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ.
ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನ ಇದೆ.
ಅಂಡರ್ ವರ್ಲ್ಡ್ ಕಥೆ ಇರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್ ಜೊತೆಗೆ ಕಾಮರಾಜನ್(ಐ ಸಿನಿಮಾ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಇದ್ದಾರೆ.
______

Be the first to comment