ಕಬ್ಜ ಸಿನಿಮಾ ತಂಡದಿಂದ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಜನವರಿ 24ರಂದು ಘೋಷಣೆ ಆಗಲಿದೆ ಎಂದು ತಿಳಿದು ಬಂದಿದೆ.
ಬಳಿಕ ಸಿನಿಮಾ ಪ್ರಚಾರ ಕೆಲಸವೂ ಚುರುಕುಗೊಳ್ಳಲಿದೆ. ಕನ್ನಡ ಸೇರಿದಂತೆ ಐದಕ್ಕೂ ಹೆಚ್ಚು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಉಪೇಂದ್ರ 80ರ ಕಾಲಘಟ್ಟದ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಅವರ ಲುಕ್ ಸಹ ಅಷ್ಟೇ ವಿಶೇಷವಾಗಿದೆ. ಇನ್ನುಳಿದಂತೆ ಶ್ರೀಯಾ ಸರಣ್ ನಾಯಕಿಯಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ. ಬಳಿಕ ಇತಿಹಾಸದಲ್ಲಿ ತನ್ನ ಛಾಪು ಮೂಡಿಸುತ್ತಾನೆ. ಇಂಥದ್ದೊಂದು ಕಥೆ ‘ಕಬ್ಜ’ ಸಿನಿಮಾದ್ದು ಎಂದು ನಿರ್ದೇಶಕರು ಸುಳಿವು ನೀಡಿದ್ದಾರೆ.
ಕರ್ನಾಟಕವಷ್ಟೇ ಅಲ್ಲ, ಬೇರೆ ಭಾಷೆಗಳಲ್ಲೂ ಈ ಚಿತ್ರಕ್ಕಾಗಿ ಬೇಡಿಕೆ ಹೆಚ್ಚಿದೆ. ಈಗಾಗಲೇ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್ನ ಜನಪ್ರಿಯ ಚಿತ್ರ ನಿರ್ಮಾಣ, ವಿತರಣಾ ಸಂಸ್ಥೆಯಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಪಡೆದುಕೊಂಡಿದೆ. ಬೇರೆ ಭಾಷೆಯ ಅವತರಣಿಕೆಗಳ ಹಕ್ಕುಗಳಿಗೂ ಬೇಡಿಕೆ ಹೆಚ್ಚಿದೆ.
ಕಳೆದ ಕೆಲ ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಯಶಸ್ವಿ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ ಗೆದ್ದು ಬೀಗಿವೆ. ಕೆಜಿಎಫ್, ವಿಕ್ರಾಂತ್ ರೋಣ, 777 ಚಾರ್ಲಿ, ಕಾಂತಾರ ಸಿನಿಮಾಗಳು ಹೊರ ರಾಜ್ಯ, ವಿ ದೇಶಗಳಲ್ಲಿಯೂ ಯಶಸ್ಸು ಕಂಡಿವೆ. ಅದೇ ಹಾದಿಯಲ್ಲಿ ಅಬ್ಬರಿಸಲು ಕಬ್ಜ ಸಿದ್ಧವಾಗಿದೆ.
ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.
__
Be the first to comment