ಸ್ಯಾಂಡಲ್ ವುಡ್ ನಲ್ಲಿ ತನ್ನ ಟೈಟಲ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಸೌಂಡ್ ಮಾಡುತ್ತಿರುವ ‘ಕಡಲ ತೀರದ ಭಾರ್ಗವ’ ಸಿನಿಮಾ ಮಾರ್ಚ್ 3ಕ್ಕೆ ‘ ತೆರೆಗೆ ಬರಲಿದೆ.
ಸೈಕಾಲಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ಸಿನಿಮಾವನ್ನು ಕುಂದಾಪುರ, ಮಂಗಳೂರು ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. 2019 ರಲ್ಲಿ ಶುರುವಾದ ಚಿತ್ರಕ್ಕೆ ಕೋವಿಡ್ ತೊಂದರೆ ಮಾಡಿತ್ತು. ಅಂತಿಮವಾಗಿ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ಚಿತ್ರ ತೆರೆಗೆ ಬರುತ್ತಿದೆ.
ಬಹುತೇಕ ಹೊಸಬರೇ ಸೇರಿ ನಿರ್ಮಿಸಿರುವ ‘ಕಡಲ ತೀರದ ಭಾರ್ಗವ’ ಸಿನಿಮಾದ ಮೂಲಕ ಭರತ್ ಗೌಡ ಮತ್ತು ಪಟೇಲ್ ವರುಣ್ ರಾಜು ನಾಯಕ ನಟರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಶ್ರುತಿ ಪ್ರಕಾಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಶ್ರೀಧರ್, ರಾಘವ ನಾಗ್, ಅಶ್ವಿನ್ ಹಾಸನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಭರತ್ ಗೌಡ ಮತ್ತು ವರುಣ್ ರಾಜು ಪಟೇಲ್ ಜಂಟಿಯಾಗಿ ನಿರ್ದೇಶಿಸಿರುವ ಈ ಸಿನಿಮಾಕ್ಕೆ ಪನ್ನಗ ಸೋಮಶೇಖರ್ ನಿರ್ದೇಶನವಿದೆ.
ಜಾಕ್ ಮಂಜುನಾಥ್ ‘ಕಡಲ ತೀರದ ಭಾರ್ಗವ’ ಸಿನಿಮಾದ ಬಿಡುಗಡೆಯ ಹೊಣೆ ವಹಿಸಿಕೊಂಡಿದ್ದಾರೆ. ರಾಜ್ಯದಾದ್ಯಂತ ಸಿಂಗಲ್ ಸ್ಕ್ರೀನ್ ಮತ್ತು ಮಲ್ಟಿಪ್ಲೆಕ್ಸ್ ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.
___





Be the first to comment