ನಾ ನಿನ್ನ ಬಿಡಲಾರೆ

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳಿಗೆ ಅನ್ಯಾಯ: ನಾ ನಿನ್ನ ಬಿಡಲಾರೆ ತಂಡದ ಆರೋಪ

ಮೈಸೂರು ಮತ್ತು ಬೆಂಗಳೂರಿನ ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳಿಗೆ ಅನ್ಯಾಯವಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಇತ್ತೀಚೆಗೆ ಬಿಡುಗಡೆಯಾದ ‘ನಾ ನಿನ್ನ ಬಿಡಲಾರೆ’ ಚಿತ್ರದ ತಂಡವು ಮಾಡಿದೆ.

ನಾಯಕಿ ಮತ್ತು ಕಾರ್ಯಕಾರಿ ನಿರ್ಮಾಪಕಿ ಭಾರತಿ ಅಂಬಾಲಿ ಅವರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಲ್ಟಿಪ್ಲೆಕ್ಸ್‌ಗಳು ಕನ್ನಡ ಚಿತ್ರಗಳಿಗೆ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ, ಚಿತ್ರದ ಪ್ರಚಾರಕ್ಕಾಗಿ ಮಲ್ಟಿಪ್ಲೆಕ್ಸ್‌ಗಳಿಗೆ ಕಳುಹಿಸಲಾದ ಪೋಸ್ಟರ್ ಗಳು ಕಾಣೆಯಾಗಿದ್ದು, ಬದಲಾಗಿ ಮುಂದಿನ ವಾರ ಬಿಡುಗಡೆಯಾಗುತ್ತಿರುವ ತೆಲುಗು ಚಿತ್ರ ‘ಪುಷ್ಪ 2’ದ ಪೋಸ್ಟರ್ ಗಳನ್ನು ಪ್ರಮುಖವಾಗಿ ಪ್ರದರ್ಶಿಸಲಾಗುತ್ತಿದೆ.

ಚಿತ್ರತಂಡದವರು ಮಲ್ಟಿಪ್ಲೆಕ್ಸ್‌ಗಳಿಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ ಬಳಿಕವಷ್ಟೇ ನಾ ನಿನ್ನ ಬಿಡಲಾರೆ ಚಿತ್ರದ ಪೋಸ್ಟರ್ ಗಳನ್ನು ಪ್ರದರ್ಶಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದು ಮಲ್ಟಿಪ್ಲೆಕ್ಸ್‌ಗಳು ಕನ್ನಡ ಚಿತ್ರಗಳನ್ನು ನಿರ್ಲಕ್ಷಿಸುತ್ತಿವೆ ಎಂಬ ಆರೋಪವನ್ನು ಬಲಪಡಿಸಿದೆ.

ಕನ್ನಡ ಚಿತ್ರಗಳಿಗೆ ಆಗುತ್ತಿರುವ ಈ ಅನ್ಯಾಯದಿಂದಾಗಿ ತಮ್ಮದೇ ನೆಲದಲ್ಲಿ ಸರಿಯಾದ ಪ್ರಚಾರ ಸಿಗುತ್ತಿಲ್ಲ ಎಂಬ ಆತಂಕವನ್ನು ಚಿತ್ರ ನಿರ್ಮಾಪಕರು ಮತ್ತು ಕಲಾವಿದರು ವ್ಯಕ್ತಪಡಿಸುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!