ಈ ವಾರ ಹಲವು ಚಿತ್ರಗಳು ರಿಲೀಸ್

ಕನ್ನಡದಲ್ಲಿಈ  ವಾರ ಹಲವು ಚಿತ್ರಗಳು ರಿಲೀಸ್ ಆಗುತ್ತಿವೆ.  ‘ಕೃಷ್ಣಂ ಪ್ರಣಯ ಸಖಿ’,  ‘ಭೀಮ’ ಚಿತ್ರದ ಅಬ್ಬರ  ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ.

‘ರಾನಿ’: 

ಕಿರಣ್ ರಾಜ್ ಅವರು ಪ್ರಮುಖ ಪಾತ್ರದ  ‘ರಾನಿ’ ಸಿನಿಮಾ ಸೆಪ್ಟೆಂಬರ್ 12ರಂದು ರಿಲೀಸ್ ಆಗುತ್ತಿದೆ.

ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ರಾಧ್ಯಾ ಆರ್, ರವಿ ಶಂಕರ್, ಯಶ್ ಶೆಟ್ಟಿ, ಧರ್ಮಣ್ಣ ಕಡೂರ್ ಮೊದಲಾದವರು ನಟಿಸಿದ್ದಾರೆ. ಚಿತ್ರವನ್ನು ಗುರುತೇಜ್ ಶೆಟ್ಟಿ ನಿರ್ದೇಶನ, ಉಮೇಶ್ ಹೆಗ್ಡೆ  ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್  ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ARM:

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ.

ಈ ಸಿನಿಮಾವನ್ನುಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ, ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

 

ಕಾಲಾಪತ್ಥರ್:

ಈ ಸಿನಿಮಾ ಸೆಪ್ಟೆಂಬರ್ 13ರಂದು ರಿಲೀಸ್ ಆಗುತ್ತಿದೆ. ವಿಕ್ಕಿ ವರುಣ್​, ಧನ್ಯಾ ರಾಮ್​ಕುಮಾರ್ ಮೊದಲಾದವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ವಿಕ್ಕಿ ವರುಣ್ ಅವರೇ ನಿರ್ದೇಶನ ಮಾಡಿದ್ದಾರೆ.

 

ವಿಕಾಸಪರ್ವ:

ರೋಹಿತ್ ನಾಗೇಶ್ ಹಾಗೂ ಸ್ವಾತಿ ನಟಿಸಿರುವ ವಿಕಾಸ ಪರ್ವ  ಚಿತ್ರ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ  ಬಿಡುಗಡೆಯಾಗಲಿದೆ.

ಅನ್ಬು ಅರಸ್  ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಈ ಚಿತ್ರದಲ್ಲಿದೆ. ಅಶ್ವಿನ್ ಹಾಸನ್, ಕುರಿರಂಗ, ಬಲ ರಾಜವಾಡಿ, ನಿಶ್ವಿಕಾಗೌಡ  ಚಿತ್ರದ ತಾರಾಗಣದಲ್ಲಿದ್ದಾರೆ.

 

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!