ಇಂದು ಐದು ಕನ್ನಡ ಸಿನಿಮಾಗಳು ತೆರೆಗೆ

ಲಂಗೋಟಿ ಮ್ಯಾನ್:

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ಆಕಾಶ್‌ ರಾಂಬೋ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಇದು ತಾತ ಮೊಮ್ಮಗನ ಸುತ್ತ ನಡೆಯುವ ಕಥೆ. ತಾತನಿಗೆ ಮೊಮ್ಮಗ ಲಂಗೋಟಿ ಹಾಕಿಕೊಳ್ಳಬೇಕು‌ ಎಂಬ ಬಯಕೆ. ಮೊಮ್ಮಗನಿಗೆ ಅಂಡರ್‌ವೇರ್ ಹಾಕಿಕೊಳ್ಳುವ ಆಸೆ. ಈ ವಿಷಯವನ್ನು ಹಾಸ್ಯ ರೂಪದಲ್ಲಿ ಚಿತ್ರದಲ್ಲಿ ಹೇಳಲಾಗಿದೆ.  ಸ್ನೇಹ ಖುಷಿ, ಸಂಹಿತ ವಿನ್ಯಾ, ಹುಲಿ ಕಾರ್ತಿಕ್‌ ಮುಂತಾದವರು  ತಾರಾಬಳಗದಲ್ಲಿದ್ದಾರೆ.

ಲಂಗೋಟಿ ಮ್ಯಾನ್

ಹಗ್ಗ:

ಅನು ಪ್ರಭಾಕರ್‌ ಮುಖ್ಯಭೂಮಿಕೆಯಲ್ಲಿರುವ ಹಾರರ್‌ ಸಿನಿಮಾ ಇದಾಗಿದೆ. ಚಿತ್ರಕ್ಕೆ ಅವಿನಾಶ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

ಚಿತ್ರದಲ್ಲಿ ಹಗ್ಗವನ್ನು ಆಯುಧವನ್ನಾಗಿ ಬಳಸಿಕೊಳ್ಳಲಾಗಿದೆ. ಒಳ್ಳೆಯ ವಿಷಯಕ್ಕಾಗಿ ಹಗ್ಗ ಹೋರಾಟ ಮಾಡುತ್ತದೆ. ಇದೊಂದು ಹಾರರ್ ಫ್ಯಾಂಟಸಿ ಆಯಕ್ಷನ್‍ ಥ್ರಿಲ್ಲರ್ ಸಿನಿಮಾ. ಹರ್ಷಿಕಾ ಪೂಣಚ್ಚ, ತಬಲಾ ನಾಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಾಜ್‌ ಭಾರದ್ವಾಜ್‌ ನಿರ್ಮಾಣ ಮಾಡಿದ್ದಾರೆ.

ಹಗ್ಗ

ಧ್ರುವತಾರೆ:

ಜಿ.ಪಿ. ಫಿಲಂಸ್ ಸ್ಟುಡಿಯೊಸ್‌ ಬ್ಯಾನರ್‌ನಡಿ ಗಣೇಶ್ ಕುಮಾರ್ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರತೀಕ್ ನಿರ್ದೇಶನದ ಜೊತೆಗೆ ನಟನೆ  ಮಾಡಿದ್ದಾರೆ.

ಇದೊಂದು ಫ್ಯಾಮಿಲಿ ಡ್ರಾಮಾದ ಕಥೆಯಾಗಿದೆ. ಬಾಡಿ ಶೇಮಿಂಗ್ ಎನ್ನುವುದು ಎಷ್ಟು ಪರಿಣಾಮ ಬೀರುತ್ತದೆ ಎನ್ನುವ ಕಥೆಯನ್ನು ಸಿನಿಮಾ ಹೊತ್ತಿದೆ.

ಚಿತ್ರದಲ್ಲಿ ಪ್ರತೀಕ್ ಅವರ ಪತ್ನಿ ಮೌಲ್ಯ  ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ರಮೇಶ್ ಭಟ್, ಸುಮನ್ ನಗರ್ಕರ್, ಅಶ್ವಿನ್ ರಾವ್ ಪಲ್ಲಕ್ಕಿ, ಪಿ.ಡಿ ಸತೀಶ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ‘ಬಿಗ್‌ಬಾಸ್’  ಕಾರ್ತಿಕ್ ಮಹೇಶ್  ಖಳನಟನಾಗಿ ಕಾಣಿಸಿಕೊಂಡಿದ್ದಾರೆ.

ಧ್ರುವತಾರೆ

‘ರಮ್ಮಿ ಆಟ’:

ಆನ್‌ಲೈನ್ ಜೂಜಾಟದ ವಿರುದ್ಧ ಧ್ವನಿಯೆತ್ತುವ ಸಿನಿಮಾ ಇದಾಗಿದೆ. ಉಮರ್ ಷರೀಫ್ ಚಿತ್ರದ ನಿರ್ದೇಶಕ. ರಮೇಶ್ ಯಾದವ್,  ಹನುಮೇಶ್ ಪಾಟೀಲ್  ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ರಾಘವ ಸೂರ್ಯ, ಸಯ್ಯದ್ ಇರ್ಫಾನ್ ಚಿತ್ರದ ನಾಯಕರು. ವಿನ್ಯಾ ಶೆಟ್ಟಿ, ಸ್ನೇಹರಾವ್, ಅಭಿಗೌಡ, ಶ್ರೀಕರ್, ರೋಷನ್ ಶ್ರೀನಿವಾಸ್‌ ತಾರಾಗಣದಲ್ಲಿದ್ದಾರೆ.

ಆನ್‌ಲೈನ್‌  ಜೂಜಾಟದ ಅಡ್ಡಪರಿಣಾಮಗಳನ್ನು ಹಾಸ್ಯದ ಮೂಲಕ ಹೇಳಲಾಗಿದೆ. ಚಿತ್ರಕ್ಕೆ ಕಾರ್ತಿಕ್‌ ಎಸ್. ಛಾಯಾಗ್ರಹಣ, ಪ್ರಭು ಎಸ್.ಆರ್‌ ಸಂಗೀತವಿದೆ.

'ರಮ್ಮಿ ಆಟ'

ಕರ್ಕಿ:

ಪವಿತ್ರನ್ ಕನ್ನಡದಲ್ಲಿ ನಿರ್ದೇಶಿಸಿರುವ ಮೊದಲ ಸಿನಿಮಾ ಇದು. ಮರಿಸೆಲ್ವರಾಜ್‌ ನಿರ್ದೇಶನದ ‘ಪರಿಯೆರುಂ ಪೆರುಮಾಳ್‌’ ಚಿತ್ರದ ರಿಮೇಕ್‌ ಇದಾಗಿದೆ.

ಪ್ರಕಾಶ್ ಪಳನಿ ‘ಕರ್ಕಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಜಯಪ್ರಕಾಶ್ (ಜೆ.ಪಿ) ರೆಡ್ಡಿ ಚಿತ್ರದ ನಾಯಕ. ಮೀನಾಕ್ಷಿ ಜೋಡಿಯಾಗಿದ್ದಾರೆ. ಸಾಧು ಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ ಮೊದಲಾದವರು ಚಿತ್ರದಲ್ಲಿದ್ದಾರೆ.

ಉಪೇಂದ್ರ ನಟಿಸಿ, ನಿರ್ದೇಶಿಸಿದ ‘ಉಪೇಂದ್ರ’ ಸಿನಿಮಾ ಮತ್ತೆ ಬಿಡುಗಡೆ ಆಗುತ್ತಿದೆ.

ಕರ್ಕಿ

Be the first to comment

Leave a Reply

Your email address will not be published. Required fields are marked *

Translate »
error: Content is protected !!