ಜೂನ್ 27ಕ್ಕೆ ಕಣ್ಣಪ್ಪ ರಿಲೀಸ್

ವಿಷ್ಣು ಮಂಚು ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಕಣ್ಣಪ್ಪ’ ಜೂನ್ 27ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆ ಬಗ್ಗೆ ಪತ್ರಿಕಾಗೋಷ್ಠಿ ನಡೆಯಿತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕಣ್ಣಪ್ಪ ಚಿತ್ರದ ನಿರ್ಮಾಪಕ ಮೋಹನ್ ಬಾಬು, ನಾಯಕ ನಟ ವಿಷ್ಣು ಮಂಚು ಸೇರಿದಂತೆ ಚಿತ್ರ ತಂಡದ ಸದಸ್ಯರು ಉಪಸ್ಥಿತರಿದ್ದರು.

ನಾಯಕ ನಟ ವಿಷ್ಣು ಮಂಚು ಅವರು ಚಿತ್ರವನ್ನು ನೋಡಿ ಹರಸುವಂತೆ ಕೋರಿದರು. ಚಿತ್ರ ತಂಡದ ಸದಸ್ಯರು ತಮ್ಮ ಅನುಭವವನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಪ್ರದರ್ಶನ ಮಾಡಲಾಯಿತು.

ಕಣ್ಣಪ್ಪ ಚಿತ್ರ ಬೇಡರ ಕಣ್ಣಪ್ಪ ಚಿತ್ರದ ಕಥೆಯನ್ನು ಆಧರಿಸಿದೆ. ಸಿನಿಮಾದಲ್ಲಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್, ನಯನತಾರಾ ಇತರರು ನಟಿಸಿದ್ದಾರೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!