ಕಾಂತಾರ

ರಾಷ್ಟ್ರಪತಿ ಭವನದಲ್ಲಿ ಕಾಂತಾರ 1 ಪ್ರದರ್ಶನ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ 1 ಚಿತ್ರ ಭಾನುವಾರ ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ ಕಂಡಿದೆ.

ದೇಶ, ವಿದೇಶದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಗೆಲುವು ಕಾಣುತ್ತಿರುವ ಚಿತ್ರ ಅಕ್ಟೋಬರ್ 5 ರಂದು ನವದೆಹಲಿಯಲ್ಲಿ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ ಮೂರು ವಿಶೇಷ ಪ್ರದರ್ಶನಗಳನ್ನು ಕಂಡಿದೆ. ಈ ಮೂಲಕ ಕನ್ನಡ ಭಾಷೆಯ ಚಿತ್ರಕ್ಕೆ ಇದು ರಾಷ್ಟ್ರೀಯ ಮನ್ನಣೆ ದೊರೆತ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ.

ರಾಷ್ಟ್ರಪತಿ ಭವನದ ಈ ವಿಶೇಷ ಪ್ರದರ್ಶನವು ಕೇವಲ ಔಪಚಾರಿಕ ಪ್ರದರ್ಶನವಾಗಿರದೆ ಪ್ರಾದೇಶಿಕ ಸಿನಿಮಾಗಳಿಗೆ ಭಾಷೆ ಮತ್ತು ಭೌಗೋಳಿಕ ಗಡಿಗಳನ್ನು ಮೀರಿ ಅತ್ಯುನ್ನತ ಸಾಂಸ್ಕೃತಿಕ ಕೋಷ್ಟಕದಲ್ಲಿ ಸ್ಥಾನ ಗಳಿಸಲು ಅನುವು ಮಾಡಿಕೊಟ್ಟಿದೆ.

ಕಾಂತಾರ: ಚಾಪ್ಟರ್ 1 ಚಿತ್ರ ಅಕ್ಟೋಬರ್ 2ರಂದು ದೇಶದಾದ್ಯಂತ 7 ಭಾಷೆಗಳಲ್ಲಿ ಬಿಡುಗಡೆ ಆಗಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನಟ ಪ್ರಭಾಸ್, ಜೂನಿಯರ್ ಎನ್‌ಟಿಆರ್ , ಯಶ್ ಸೇರಿದಂತೆ ಹಲವರು ರಿಷಬ್ ಶೆಟ್ಟಿ ಅವರನ್ನು ಶ್ಲಾಘಿಸಿದ್ದಾರೆ.

ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಕಾಂತಾರ: ಚಾಪ್ಟರ್ 1 ನಲ್ಲಿ ರಿಷಬ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಜಯರಾಮ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರಕ್ಕೆ ಬಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರವಿಂದ್ ಎಸ್ ಕಶ್ಯಪ್ ಅದ್ಭುತ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಸುರೇಶ್ ಮಲ್ಲಯ್ಯ ಸಂಕಲನ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!