ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1 ಟ್ರೈಲರ್ ಸೆಪ್ಟಂಬರ್ 22 ಕ್ಕೆ ಬಿಡುಗಡೆಯಾಗಲಿದೆ.
ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ 1 ಚಿತ್ರ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೈಲರ್ ಮೇಲೆ ಸಿನಿಪ್ರಿಯರ ಕಣ್ಣು ನೆಟ್ಟಿದೆ.
ಕಾಂತಾರ ಸಿನಿಮಾ ಬಿಡುಗಡೆಯಾದ ಮೇಲೆ ಹವಾ ಕ್ರಿಯೇಟ್ ಮಾಡಿತ್ತು. ಆದರೆ ಕಾಂತಾರ ಚಾಪ್ಟರ್ 1 ಬಿಡುಗಡೆ ಮುನ್ನವೇ ಕೋಟಿಗಟ್ಟಲೆ ವ್ಯವಹಾರ ಮಾಡಿದೆ. ಹೀಗಾಗಿ ಈ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.
ಕಾಂತರಾ ಚಿತ್ರದ ನಾಯಕಿಯಾಗಿ ರುಕ್ಮಿಣಿ ವಸಂತ್ ಅವರು ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ನಟಿಸಿರುವ ತಾರಾ ಬಳಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ನೀಡಿಲ್ಲ. ಟ್ರೈಲರ್ ಬಿಡುಗಡೆ ನಂತರ ಚಿತ್ರದಲ್ಲಿ ಯಾರು ನಟಿಸಿದ್ದಾರೆ ಎನ್ನುವ ಮಾಹಿತಿ ತಿಳಿಯಲಿದೆ.
ಕಾಂತಾರ 1 ಕನ್ನಡ ಅಲ್ಲದೇ ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಕೆಲ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಕಳೆದ ಬಾರಿ ಕಾಂತಾರ ಚಿತ್ರ ಮೊದಲು ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿತ್ತು. ನಂತರ ಇತರ ಭಾಷೆಗಳಲ್ಲಿ ಡಬ್ ಆಗಿತ್ತು. ಈ ಬಾರಿ ಏಕಕಾಲದಲ್ಲಿ ಅನೇಕ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈ ಕಾರಣದಿಂದ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದಲ್ಲಿ ಧೂಳು ಎಬ್ಬಿಸಲಿದೆ ಎಂದು ಹೇಳಲಾಗುತ್ತಿದೆ.

_





Be the first to comment