ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ ಕಾಂತರಾ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದೆ.
ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿರುವ ಕಾಂತರಾ ಚಾಪ್ಟರ್ 1 ಟ್ರೈಲರ್ ಅದ್ದೂರಿಯಾಗಿ ಮೂಡಿ ಬಂದಿದೆ. ಪೌರಾಣಿಕ ಕಥೆಯ ಸಿನಿಮಾದ ಪಾತ್ರಗಳು ಶ್ರೀಮಂತವಾಗಿ ಮೂಡಿ ಬಂದಿವೆ.
ಬೆರ್ಮೆ ಪಾತ್ರದಲ್ಲಿ ರಿಷಬ್ ಶೆಟ್ಟಿ ಅವರು ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ ಅವರು ಕನಕಾವತಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಗುಲ್ಶನ್ ದೇವಯ್ಯ ಅವರು ಕುಲಶೇಖರ ಪಾತ್ರದಲ್ಲಿ ಅರ್ಭಟಿಸಿದ್ದಾರೆ.
ಕಾಂತರಾ 1 ಚಿತ್ರ ಕನ್ನಡ ಅಲ್ಲದೇ ಮಲಯಾಳಂ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಕಾಂತಾರ ಚಿತ್ರ ಕನ್ನಡದಲ್ಲಿ ಮೊದಲು ಬಿಡುಗಡೆಗೊಂಡು ಆನಂತರ ಇತರ ಭಾಷೆಗಳಿಗೆ ಡಬ್ ಆಗಿತ್ತು. ಈ ಬಾರಿ ಏಕಕಾಲದಲ್ಲಿ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆ ಆಗುತ್ತಿರುವ ಕಾರಣ ಬಾಕ್ಸ್ ಆಫೀಸ್ ನಲ್ಲಿ ಚಿತ್ರ ದೊಡ್ಡ ಮಟ್ಟದಲ್ಲಿ ಧೂಳು ಎಬ್ಬಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಕಾಂತಾರ ಚಾಪ್ಟರ್ 1 ಬಿಡುಗಡೆ ಮುನ್ನವೇ ಕೋಟಿಗಟ್ಟಲೆ ವ್ಯವಹಾರ ಮಾಡಿದೆ. ಹೀಗಾಗಿ ಈ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.
_





Be the first to comment