2,500ಕ್ಕೂ ಹೆಚ್ಚು ಪರದೆಗಳಲ್ಲಿ ‘ಕಾಂತಾರ 1’ ಪೇಯ್ಡ್ ಪ್ರೀಮಿಯರ್

ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ‘ಕಾಂತಾರ: ಚಾಪ್ಟರ್ 1′ ಚಿತ್ರವನ್ನು ಭಾರತ ಮತ್ತು ವಿದೇಶಗಳಲ್ಲಿ ಬಹು ಭಾಷೆಗಳಲ್ಲಿ 2,500ಕ್ಕೂ ಹೆಚ್ಚು ಪರದೆಗಳಲ್ಲಿ ಪೇಯ್ಡ್ ಪ್ರೀಮಿಯರ್ ಮಾಡಲು ಯೋಜಿಸಲಾಗಿದೆ.

ಕಾಂತಾರ: ಚಾಪ್ಟರ್ 1  ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರ ಸಂಜೆ 2,500ಕ್ಕೂ ಹೆಚ್ಚು ಪರದೆಗಳಲ್ಲಿ ಪೇಯ್ಡ್ ಪ್ರೀಮಿಯರ್ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ.

ಇದು ಕನ್ನಡ ಚಿತ್ರವೊಂದಕ್ಕೆ ಇದುವರೆಗಿನ ಅತಿದೊಡ್ಡ ಪ್ರೀಮಿಯರ್‌ಗಳಲ್ಲಿ ಒಂದಾಗಿದೆ.ಕನ್ನಡ, ಮಲಯಾಳಂ, ತಮಿಳು, ತೆಲುಗು, ಹಿಂದಿ, ಬಂಗಾಳಿ ಮತ್ತು ಇಂಗ್ಲಿಷ್ ಸೇರಿದಂತೆ 7ಕ್ಕೂ ಹೆಚ್ಚು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಕಾಂತಾರ ಚಿತ್ರ ತೆರೆಕಂಡ ಬಳಿಕ ಎಲ್ಲ ಕಡೆಯಿಂದಲೂ ವ್ಯಾಪಕ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂತಾರ: ಚಾಪ್ಟರ್ 1 ಅನ್ನು ನಿರ್ಮಿಸಲಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ: ಚಾಪ್ಟರ್ 1 ಡಿಜಿಟಲ್ ಹಕ್ಕುಗಳನ್ನು ಈಗಾಗಲೇ ಅಮೆಜಾನ್ ಪ್ರೈಮ್ ವಿಡಿಯೋ ₹125 ಕೋಟಿಗೆ ಪಡೆದುಕೊಂಡಿದೆ. ಭಾರತ ಮತ್ತು ವಿದೇಶಗಳಾದ್ಯಂತ ದೊಡ್ಡ ನಿರ್ಮಾಣ ಸಂಸ್ಥೆಗಳು ಚಿತ್ರದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿವೆ.

ಸಾಮಾನ್ಯವಾಗಿ ಭಾರತದಾದ್ಯಂತ ಪ್ರದರ್ಶನಗೊಳ್ಳುವ ದೊಡ್ಡ ಬ್ಲಾಕ್‌ಬಸ್ಟರ್ ಚಲನಚಿತ್ರಗಳಿಗೆ ಮಾತ್ರ ಪೇಯ್ಡ್ ಪ್ರದರ್ಶನಗಳು ನಡೆಯುತ್ತವೆ.  ‘ಕಾಂತಾರ: ಚಾಪ್ಟರ್ 1′ ಬಿಡುಗಡೆಗೂ ಮೊದಲೇ ಅನೇಕ ಶೋಗಳು   ಮಾರಾಟವಾಗುತ್ತಿವೆ.

—–

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!