‘ಕಾಂತಾರ ಚಾಪ್ಟರ್ 1’ ಗಳಿಸಿದ್ದೆಷ್ಟು?

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ: ಚಾಪ್ಟರ್ 1’ ಚಿತ್ರವು  ಬಿಡುಗಡೆಯಾದ ಎಲ್ಲ ಭಾಷೆಗಳಲ್ಲಿ ಮೊದಲನೇ ದಿನ 60 ಕೋಟಿ ರೂ. ಗಳಿಸಿದೆ.

ತೀವ್ರ ನಿರೀಕ್ಷೆ ಹುಟ್ಟುಹಾಕಿದ್ದ ‘ಕಾಂತಾರ: ಚಾಪ್ಟರ್ 1’ ಚಿತ್ರ  ಅಕ್ಟೋಬರ್ 2ರಂದು ದೇಶದಾದ್ಯಂತ ಬಿಡುಗಡೆ ಕಂಡಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಚಿತ್ರ  ಹಿಂದಿಯಲ್ಲಿ ಸುಮಾರು 19–21 ಕೋಟಿ ರೂ. ಗಳಿಸಿದೆ. ಇದು ಈ ವರ್ಷದ ಇದುವರೆಗಿನ ಅತಿದೊಡ್ಡ ಬಿಡುಗಡೆ ಎಂದು ಹೇಳಲಾಗುತ್ತಿದೆ.

ಕಾಂತಾರ: ಚಾಪ್ಟರ್ 1 ಚಿತ್ರ  ಹಿಂದಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಗಳಿಕೆ ಕಂಡ ಕನ್ನಡದ ಎರಡನೇ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.   54 ಕೋಟಿ ರೂ. ನಿವ್ವಳ ಗಳಿಕೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್: ಚಾಪ್ಟರ್ 2 ನಂತರದ ಸ್ಥಾನ ಪಡೆದಿದೆ.

125 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಕಾಂತಾರ: ಚಾಪ್ಟರ್ 1 ನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ಚಿತ್ರದಲ್ಲಿ ಜಯರಾಮ್, ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರಿಷಬ್ ಅವರೊಂದಿಗೆ ಅನಿರುದ್ಧ್ ಮಹೇಶ್ ಮತ್ತು ಶನಿಲ್ ಗೌತಮ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!