ಹೊಂಬಾಳೆ ಫಿಲ್ಮ್ಸ್ ನಿರ್ದೇಶಕ ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಿದೆ.
ಚಿತ್ರೀಕರಣ ಮುಗಿದ ಸಂಭ್ರಮದಲ್ಲಿ ಬಿಡುಗಡೆಯಾಗಿರುವ ಈ ವಿಡಿಯೋ 250 ದಿನಗಳಿಗೂ ಹೆಚ್ಚು ಕಾಲ ನಡೆದ ಶೂಟಿಂಗ್ ಪಯಣವನ್ನು ತೋರಿಸುತ್ತದೆ. ಈ ವಿಡಿಯೋ ಸಿನಿಮಾಕ್ಕಾಗಿ ಹಾಕಿದ ಭಾರಿ ಶ್ರಮ ಮತ್ತು ಅದರ ಅದ್ದೂರಿತನವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ನಿರ್ದೇಶಕ ರಿಷಬ್ ಶೆಟ್ಟಿ , ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಅರವಿಂದ್ ಕಶ್ಯಪ್, ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ ಸೇರಿದಂತೆ ಇಡೀ ತಂಡ ಸಿನಿಮಾಗೆ ಅದ್ದೂರಿ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.
‘ಕಾಂತಾರ ಚಾಪ್ಟರ್ 1’ ಮೂಲಕ ಹೊಂಬಾಳೆ ಫಿಲ್ಮ್ಸ್ ಭಾರತೀಯ ಸಿನಿಮಾದ ಗಡಿಗಳನ್ನು ಮೀರಿ ಬೆಳೆಯುತ್ತಿದೆ. ಜಾನಪದ ನಂಬಿಕೆ ಮತ್ತು ಸಿನಿಮೀಯ ಶ್ರೇಷ್ಠತೆಯನ್ನು ಆಚರಿಸುವ ಆಳವಾದ ಅನುಭವವನ್ನು ಈ ಸಿನಿಮಾ ಪ್ರೇಕ್ಷಕರಿಗೆ ನೀಡಲಿದೆ.
‘ಕಾಂತಾರ ಚಾಪ್ಟರ್ 1’ ಅಕ್ಟೋಬರ್ 2 ರಂದು ವಿಶ್ವಾದ್ಯಂತ ಸಿನಿಮಾ, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ.
—-





Be the first to comment