ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಚಿತ್ರ ಬಿಡುಗಡೆಗೊಂಡ 17 ದಿನಗಳಲ್ಲೇ ವಿಶ್ವಾದ್ಯಂತ 717 ಕೋಟಿ ರೂ. ಗಳಿಸಿದೆ.
ಅಕ್ಟೋಬರ್ 2ರಂದು ಬಿಡುಗಡೆಯಾದ ಈ ಸಿನಿಮಾ ಎಲ್ಲ ಭಾಷೆಗಳಲ್ಲೂ ಭರ್ಜರಿ ಕಲೆಕ್ಷನ್ ದಾಖಲಿಸಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್ನಲ್ಲಿ 506 ಕೋಟಿ ರೂ. ಗಳಿಸಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಪ್ರೇಕ್ಷಕರಿಂದ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.
‘ಹೊಂಬಾಳೆ ಫಿಲ್ಮ್ಸ್’ ನೀಡಿದ ಮಾಹಿತಿಯ ಪ್ರಕಾರ ಸಿನಿಮಾ ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಗಳಿಸಿದೆ. ಮುಂದಿನ ವಾರಗಳಲ್ಲಿ ಈ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ದೀಪಾವಳಿ ರಜೆಗಳ ಕಾರಣದಿಂದ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆಯು ಹೆಚ್ಚುವ ಸಾಧ್ಯತೆ ಇದೆ. ಇದರಿಂದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಹೆಚ್ಚು ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.
‘ಕಾಂತಾರ: ಚಾಪ್ಟರ್ 1’ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಭರ್ಜರಿ ಲಾಭವಾಗಿದೆ. ರಿಷಬ್ ಶೆಟ್ಟಿ ಅವರ ಖ್ಯಾತಿ ಪ್ಯಾನ್ ಇಂಡಿಯಾ ಮಟ್ಟಕ್ಕೆ ಏರಿದೆ. ರುಕ್ಮಿಣಿ ವಸಂತ್ ಕೂಡಾ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
—-





Be the first to comment