ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಕಾಂತಾರ’ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಚಿತ್ರ ವೀಕ್ಷಿಸಿದ ಬಳಿಕ ಅವರು ಟ್ವೀಟ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ರಿಷಬ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ಈ ಚಿತ್ರ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಯನ್ನು ತುಂಬಾ ಚೆನ್ನಾಗಿ ಪ್ರಸ್ತುತಪಡಿಸಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.
ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್‌ನಲ್ಲಿ ಬುಧವಾರ ಸಚಿವರು ಸ್ವಯಂ ಸೇವಕರ ಜೊತೆ ಚಿತ್ರ ವೀಕ್ಷಿಸಿದರು.
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರ 300 ಕೋಟಿ ರೂಪಾಯಿ ಗಳಿಸಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
____

Be the first to comment