ಕಾಂತಾರ ಚಿತ್ರದ ಕಲಾವಿದ ಸಾವು

‘ಕಾಂತಾರ ಚಾಪ್ಟರ್ 1’ ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂದು ಗುರುತಿಸಲಾಗಿದೆ. ಅವರು ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ದುರ್ಘಟನೆ ನಡೆದಿದೆ.

ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ವಿಜು ವಿ ಕೆ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ.  ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು.

ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿಯಲ್ಲಿ ಪ್ರವಾಹದಲ್ಲಿ ಕೊಚ್ಚಿ  ಜೂನಿಯರ್ ಕಲಾವಿದ ಎಂ ಎಫ್ ಕಪಿಲ್ ಅವರು  ಸಾವನ್ನಪ್ಪಿದ್ದರು. ‘ಕಾಂತಾರ: ಚಾಪ್ಟರ್ 1’ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಕುಸಿದು ಸಾವನ್ನಪ್ಪಿದ್ದರು.  ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೆ  ವಿಶೇಷ ಪಾತ್ರ ನೀಡಲಾಗಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!