ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರ ಈಗಾಗಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು, ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ಇನ್ನಷ್ಟು ಹಣ ಬಾಚುವತ್ತ ಹೆಜ್ಜೆ ಹಾಕಿದೆ.
ಈ ಚಿತ್ರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕನ್ನಡ ಅಲ್ಲದೇ ಬೇರೆ ಭಾಷೆಗಳಲ್ಲಿ ಚಿತ್ರಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಚಿತ್ರ ಇನ್ನಷ್ಟು ಹಣ ಬಾಚುವ ನಿರೀಕ್ಷೆ ಹೊಂದಲಾಗಿದೆ.
ಕನ್ನಡದಲ್ಲಿ ಈ ವರ್ಷ ಹಲವು ಚಿತ್ರಗಳು 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ದಾಖಲೆ ಮಾಡಿರುವುದು ವಿಶೇಷ ಆಗಿದೆ.
‘ಜೇಮ್ಸ್’ ಚಿತ್ರ ,100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಮೊದಲ ಚಿತ್ರ ಎನಿಸಿತು. ಪುನೀತ್ ಅವರ ಜನ್ಮದಿನವಾದ ಮಾರ್ಚ್ 17ರಂದು ‘ಜೇಮ್ಸ್’ ಸಿನಿಮಾ ಬಿಡುಗಡೆ ಆಯಿತು. ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಆದ ಕಾರಣ ಅಭಿಮಾನಿಗಳು ಉತ್ತಮವಾಗಿ ಸ್ಪಂದಿಸಿದರು. ಈ ಚಿತ್ರ 150 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ 2 ಸಿನಿಮಾ ಏಪ್ರಿಲ್ 14ರಂದು ರಿಲೀಸ್ ಆಯಿತು. ಯಶ್ ನಟನೆಯ ಈ ಚಿತ್ರ 1250 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ.
ರಕ್ಷಿತ್ ಶೆಟ್ಟಿ ನಿರ್ಮಾಣದಲ್ಲಿ ತೆರೆಗೆ ಬಂದ ‘777 ಚಾರ್ಲಿ’ ದೊಡ್ಡ ಮಟ್ಟದ ಯಶಸ್ಸು ಕಂಡಿತು. ಈ ಚಿತ್ರ 100 ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಜುಲೈ 28ಕ್ಕೆ ರಿಲೀಸ್ ಆದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ 3ಡಿಯಲ್ಲಿ ಮೂಡಿ ಬಂದು ಪ್ರೇಕ್ಷಕರನ್ನು ಮೋಡಿ ಮಾಡುವಲ್ಲಿ ಯಶಸ್ವಿ ಆಯಿತು. ಈ ಚಿತ್ರ 200 ಕೋಟಿ ರೂಪಾಯಿ ಗಳಿಸಿದೆ ಎಂದು ಹೇಳಲಾಗಿದೆ. ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿತ್ತು.
Be the first to comment