ಕಾಂತಾರ

ಅಕ್ಟೋಬರ್‌ 2ರಂದು ‘ಕಾಂತಾರ 1’ ಬಿಡುಗಡೆ

‘ಕಾಂತಾರ’ ಸಿನಿಮಾದ  ಪ್ರೀಕ್ವೆಲ್ ವರ್ಷನ್ ‘ಕಾಂತಾರ ಚಾಪ್ಟರ್ 1’ ಚಿತ್ರ ಇದೇ ವರ್ಷ ಅಕ್ಟೋಬರ್‌ 2ರಂದು ವಿಶ್ವದಾದ್ಯಂತ ತೆರೆಗೆ ಬರುತ್ತಿದೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಜುಲೈ 7,  ಸೋಮವಾರ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು,  ಹುಟ್ಟುಹಬ್ಬದ ಪ್ರಯುಕ್ತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಿಗ್‌ ಅಪ್ಡೇಟ್‌  ನೀಡಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ  ‘ಕಾಂತಾರ ಚಾಪ್ಟರ್‌ 1’ ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.

ರಿಷಬ್‌ ಶೆಟ್ಟಿ ಜನ್ಮದಿನದ ಪ್ರಯುಕ್ತ ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್  ಅಧಿಕೃತವಾಗಿ ಹಂಚಿಕೊಂಡಿದೆ. ಹುಟ್ಟುಹಬ್ಬದ ದಿನ  ರಿಷಬ್‌ಗೆ ಭರ್ಜರಿ ಗಿಫ್ಟ್‌ ಕೊಟ್ಟಿರುವ ಚಿತ್ರತಂಡ ʻದಂತಕಥೆಯ ಮುನ್ನುಡಿ… ಆ ನುಡಿಗೊಂದು ಪರಿಚಯ… ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ.ʼ ಎನ್ನುವ ಸಾಲಿನೊಂದಿಗೆ ವಿಶೇಷ ಪೋಸ್ಟರ್‌ವೊಂದನ್ನು ಹಂಚಿಕೊಂಡಿದೆ.

ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ.  ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಎದ್ದು ಕಾಣುತ್ತಿದೆ. ರಕ್ತಸಿಕ್ತ ಅವತಾರದಲ್ಲಿ ಘರ್ಜಿಸುತ್ತಿರುವ ಅವತಾರದಲ್ಲಿ ರಿಷಬ್ ಶೆಟ್ಟಿ ಕಂಡು ಬಂದಿದ್ದಾರೆ. ಹಿಂಭಾಗದಲ್ಲಿ ಬೆಂಕಿ ಇದೆ.

‘ಕಾಂತಾರ-1’ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆಯನ್ನು ಈಗಾಗಲೇ ಹುಟ್ಟು ಹಾಕಿದೆ.

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!