ಕಾಂತಾರ ಚಿತ್ರವನ್ನು ನಿರ್ಮಾಣ ಸಂಸ್ಥೆ ಹೊಂಬಾಳೆ ಪ್ರೊಡಕ್ಷನ್ ಹೌಸ್ ಇಂಗ್ಲಿಷ್ ನಲ್ಲಿ ಡಬ್ ಮಾಡಿ ಹಾಲಿವುಡ್ ನಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ ಎನ್ನುವ ಸುದ್ದಿ ಬಂದಿದೆ.
ಕನ್ನಡದಲ್ಲಿ ಮಾತ್ರ ಬಂದಿದ್ದ ‘ಕಾಂತಾರ’ ಸಿನಿಮಾ ಕೊನೆಗೆ ಪ್ರೇಕ್ಷಕರ ಪ್ರತಿಕ್ರಿಯೆ ಮೇರೆಗೆ ತೆಲುಗು, ತಮಿಳು, ಮಲೆಯಾಳ, ಹಿಂದಿಗೆ ಡಬ್ ಆಗಿ ಸೂಪರ್ ಹಿಟ್ ಎನಿಸಿತು.
ತುಳು ಭಾಷೆಯಲ್ಲೂ ಈ ಸಿನಿಮಾ ಬಿಡುಗಡೆ ಆಗಿದೆ. ಒಟಿಟಿಯಲ್ಲಿ ಕಾಂತಾರ ಬಿಡುಗಡೆ ಆಗಿದ್ದರೂ, ಈಗ ಮತ್ತೆ ಇದು ಸದ್ದು ಮಾಡಲಿದೆ ಎಂದು ಹೇಳಲಾಗಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಈ ಚಿತ್ರ ತುಳು ನಾಡಿನ ದೈವ ಸಂಸ್ಕೃತಿಯನ್ನು ಅನಾವರಣ ಮಾಡುವಲ್ಲಿ ಯಶಸ್ವಿ ಆಗಿತ್ತು. ಕಿಶೋರ್, ಸಪ್ತಮಿ ಗೌಡ, ಅಚ್ಚುತ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು.
___

Be the first to comment