ರಾಜಮೌಳಿ ಅವರ ಆರ್ ಆರ್ ಆರ್, ಪ್ರಶಾಂತ್ ನೀಲ್ ಅವರ ಕೆಜಿಎಫ್ 2 ಚಿತ್ರಕ್ಕಿಂತಲೂ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರಾ ಚಿತ್ರ ಅತಿಹೆಚ್ಚು IMDb ರೇಟಿಂಗ್ ಪಡೆದಿದೆ.
ರಿಷಬ್ ಶೆಟ್ಟಿ ಅವರ ಕಾಂತಾರ IMDb ನಲ್ಲಿ 10 ರಲ್ಲಿ 9.5 ರೇಟಿಂಗ್ ಮೂಲಕ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಕನ್ನಡದಲ್ಲಿ ತಯಾರಾದ ಈ ಚಿತ್ರವು ಯಶ್ ಅವರ ಕೆಜಿಎಫ್ 2 (8.4/10) ಮತ್ತು ಎಸ್ಎಸ್ ರಾಜಮೌಳಿ ಅವರ ಆರ್ಆರ್ಆರ್ (8/10) ಮೀರಿಸಿದೆ.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸೆಪ್ಟೆಂಬರ್ 30ರಂದು ಬಿಡುಗಡೆಯಾಯಿತು. ಈ ಚಿತ್ರ ಕರ್ನಾಟಕದಲ್ಲಿ 70 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ಕಾಂತಾರ ನಿರ್ಮಾಪಕರು ಚಿತ್ರದ ಡಬ್ಬಿಂಗ್ ಆವೃತ್ತಿಯನ್ನು ಇತರ ಭಾಷೆಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಚಿತ್ರದ ಹಿಂದಿ ಆವೃತ್ತಿ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದ್ದರೆ, ತಮಿಳು ಮತ್ತು ತೆಲುಗು ಆವೃತ್ತಿಯು ಅಕ್ಟೋಬರ್ 15 ರಂದು ದೊಡ್ಡ ಪರದೆಯಲ್ಲಿ ಬರುತ್ತಿದೆ.
ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿಯೊಂದಿಗೆ, ಅಚ್ಯುತ್ ಕುಮಾರ್, ಸಪ್ತಮಿ ಗೌಡ, ಕಿಶೋರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕೆಜಿಎಫ್ ಮತ್ತು ಕೆಜಿಎಫ್ 2 ನ ತಯಾರಕರಾದ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದೆ.
________

Be the first to comment