‘Kantara 2’: ‘ಕಾಂತಾರಾ 2’ ನವೆಂಬರ್​ನಲ್ಲಿ ಶೂಟಿಂಗ್!

ಕಾಂತಾರ 2 ಚಿತ್ರವನ್ನು ನವೆಂಬರ್​ನಲ್ಲಿ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ರಿಲೀಸ್ ಆಗಿ ವರ್ಷ ಕಳೆದಿದೆ. ಸದ್ಯ ರಿಷಬ್ ಅವರು ‘ಕಾಂತಾರ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗಲಿದೆ ಎಂದು ರಿಷಬ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೂಲಗಳ ಪ್ರಕಾರ ನವೆಂಬರ್​ನಲ್ಲಿ ಶೂಟಿಂಗ್ ಶುರುವಾಗಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ. 2024ರ ಏಪ್ರಿಲ್-ಮೇ ತಿಂಗಳಲ್ಲಿ ಚಿತ್ರವನ್ನು ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

‘ಕಾಂತಾರ 2’ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಲಿದೆ ಎಂದು ವರದಿ ಆಗಿತ್ತು. ಆದರೆ ಸಣ್ಣ ಬಜೆಟ್​ನಲ್ಲಿ ಸಿನಿಮಾ ಮಾಡಿ ಹೆಚ್ಚಿನ ಲಾಭವನ್ನು ಕಂಡುಕೊಳ್ಳಲು ಪ್ಲ್ಯಾನ್ ಮಾಡಲಾಗಿದೆ.

ಸೆಪ್ಟೆಂಬರ್ 30ಕ್ಕೆ ‘ಕಾಂತಾರ’ ರಿಲೀಸ್ ಆಗಿ ಒಂದು ವರ್ಷ ಆಗಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!