ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ಅನುದಾನ

ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರವು 12 ಕೋಟಿ ರೂಪಾಯಿ ಅನುದಾನ ನೀಡಲು ಒಪ್ಪಿಗೆ ನೀಡಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನ ನೀಡಿದ್ದರು. ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಂದಷ್ಟು ಕೆಲಸಗಳೂ ನಡೆದಿದ್ದವು. ಸಚಿವ ಸಂಪುಟ ಈಗ ಮತ್ತೆ 12 ಕೋಟಿ ರೂಪಾಯಿ ಅನುದಾನ ನೀಡಲು ಅನುಮೋದನೆ ನೀಡಲು ಒಪ್ಪಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿದ ವೇಳೆ, ಅಂಬರೀಶ್ ಅಭಿಮಾನಿಗಳು ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಬೇಕು. ಅವರಿಗೆ ಪದ್ಮಶ್ರೀ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಅವರು, ”ಪುನೀತ್ ಅವರನ್ನು ಕಳೆದುಕೊಂಡಿರುವ ಈ ಸಮಯದಲ್ಲಿ ಸಂಯಮ ತೋರಬೇಕು. ಈ ಸಮಯದಲ್ಲಿ ಪ್ರಶಸ್ತಿಗೆ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಶ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯ” ಎಂದು ಹೇಳಿದ್ದರು.

ಕನ್ನಡದ ಹಿರಿಯ ನಟ ಅಂಬರೀಶ್ ಅವರು 2018ರ ನವೆಂಬರ್​ 24 ರಂದು ನಿಧನರಾಗಿದ್ದರು.
__

 

Be the first to comment

Leave a Reply

Your email address will not be published. Required fields are marked *

Translate »
error: Content is protected !!