ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರಕಾರ ಮರಣೋತ್ತರ ಆಗಿ ನೀಡಿದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಅವರು ಪುನೀತ್ ಅವರಿಗೆ ಅರ್ಪಿಸಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆ ಹಾಗೂ ಸಿನಿಮಾ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಿನ್ನೆ ನೀಡಿ ಗೌರವಿಸಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿ, ಸರಕಾರಕ್ಕೆ ಧನ್ಯವಾದ ತಿಳಿಸಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಮನೆಗೆ ತೆರಳಿದ ಪುನೀತ್ ಪತ್ನಿ ಅಶ್ವಿನಿ ಹಾಗೂ ಪುತ್ರಿ ವಂದಿತ ಪ್ರಶಸ್ತಿ ಹಾಗೂ ಮೆಡಲ್ ನ್ನು ಪುನೀತ್ ಅವರ ಫೋಟೋಗೆ ಅರ್ಪಿಸಿದರು. ಈ ಮೂಲಕ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ತಲುಪಿಸಿದ ಭಾವುಕ ಕ್ಷಣಕ್ಕೆ ಸಾಕ್ಷಿ ಆದರು.
ನಿನ್ನೆ ಮಳೆಯ ನಡುವೆ ವಿಧಾನ ಸೌಧದ ಮೆಟ್ಟಿಲು ಮುಂಭಾಗ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ತಮಿಳು ನಟ ರಜನಿಕಾಂತ್, ತೆಲುಗು ನಟ ಜ್ಯೂನಿಯರ್ ಎನ್.ಟಿ.ಆರ್, ಶಿವರಾಜ್ ಕುಮಾರ್, ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
____

Be the first to comment