ಆ. 15ಕ್ಕೆ ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ‘ಜೀ ಕನ್ನಡ’ ವಾಹಿನಿಯಲ್ಲಿ ಆಗಸ್ಟ್ 15ರಂದು ಮಧ್ಯಾಹ್ನ 3 ಗಂಟೆಗೆ ಪ್ರದರ್ಶನ ಆಗಲಿದೆ.

ಈ ವರ್ಷ ಅತಿ ಹೆಚ್ಚು ಸೆನ್ಸೇಷನ್ ಸೃಷ್ಟಿ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪಡೆದಿದೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರ ಹಿಂದಿಯಲ್ಲಿ ತಯಾರಾದ ನಂತರ ಬೇರೆ ಭಾಷೆಗಳಿಗೆ ಡಬ್ ಆಗಿ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಿತ್ತು. ಈಗ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ಈ ಚಿತ್ರವನ್ನು ಮಿಸ್ ಮಾಡಿಕೊಂಡವರಿಗೆ ಈಗ ಕಿರುತೆರೆಯಲ್ಲಿ ವೀಕ್ಷಿಸಲು ಅವಕಾಶ ಸಿಕ್ಕಿದೆ.

ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕಮಾರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ಪ್ರಕಾಶ್ ಬೆಳವಾಡಿ, ಪುನೀತ್ ಇಸಾರ್ ಮುಂತಾದವರು ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ನಿರ್ಮಾಣವಾದ ಈ ಸಿನಿಮಾವನ್ನು ಅನೇಕ ರಾಜಕಾರಣಿಗಳು ನೋಡಿ ಮೆಚ್ಚಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆಯ ಮಾತುಗಳನ್ನು ಆಡಿದ್ದರು.

ಈ ಚಿತ್ರ 15ರಿಂದ 20 ಕೋಟಿ ರೂಪಾಯಿ ಬಜೆಟ್ನಲ್ಲಿ ತಯಾರಾಗಿದೆ. ಆದರೆ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ 252 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾ ಕೋಮುದ್ವೇಷವನ್ನು ಬಿತ್ತುತ್ತದೆ ಎಂಬ ಆರೋಪ ಕೂಡ ಹಲವರಿಂದ ಕೇಳಿಬಂತು. ಈ ಕಾರಣದಿಂದ ಇದು ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿತು. ಈ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಬೇಡಿಕೆ ಹೆಚ್ಚಿದೆ.
—-

Be the first to comment

Leave a Reply

Your email address will not be published. Required fields are marked *

Translate »
error: Content is protected !!