ಎನ್.ಆರ್. ನಂಜುಂಡೇಗೌಡ ನಿರ್ದೇಶನದ ಕಾಸಿನಸರ ಚಿತ್ರ ಮಾ.3ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ.
ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಹರ್ಷಿಕಾ ಪೂಣಚ್ಛ ನಾಯಕಿಯಾಗಿ ನಟಿಸಿದ್ದಾರೆ.
ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಈ ಚಿತ್ರ ಹೊಂದಿದೆ. ಇಲ್ಲಿ ಸಾವಯುವ ಕೃಷಿಯ ಬಗ್ಗೆ ಹೇಳಲಾಗಿದೆ. ದೊಡ್ಡನಾಗಯ್ಯ ಅವರು ಚಿತ್ರ ನಿರ್ಮಾಣ ಮಾಡಿದ್ದಾರೆ.
ಚಿತ್ರದಲ್ಲಿ ಸುಂದರೇಶ ಎಂಬ ವ್ಯವಸಾಯದ ಮೇಲೆ ಭರವಸೆ ಇಟ್ಟಿರುವ ರೈತ ಹೋರಾಟಗಾರನಾಗಿ ನಟಿಸಿದ್ದೇನೆ ಎಂದು ವಿಜಯ ರಾಘವೇಂದ್ರ ಹೇಳಿದ್ದಾರೆ.
ನಾಯಕಿ ಹರ್ಷಿಕಾ ಪೂಣಚ್ಛ ಅವರು ಮೂರು ವರ್ಷದ ನಂತರ ನನ್ನ ಅಭಿನಯದ ಸಿನಿಮಾ ತೆರೆಗೆ ಬರ್ತಿದೆ. ಈ ಚಿತ್ರದಲ್ಲಿ ನಾನು ಕೃಷಿ ವಿದ್ಯಾರ್ಥಿನಿ ಸಂಪಿಗೆಯ ಪಾತ್ರ ಮಾಡಿದ್ದೇನೆ. ಗ್ರಾಜುಯೇಟ್ ಆದರೂ ಗಂಡನಿಗೆ ಸಪೋರ್ಟ್ ಆಗಿ ನಿಲ್ಲುವ ಪಾತ್ರ. ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇರೋ ಪಾತ್ರ ಎಂದಿದ್ದಾರೆ.
ನಿರ್ದೇಶಕ ನಂಜುಂಡೇಗೌಡ ಅವರು, ಕಾಸಿನ ಸರಕ್ಕೆ ಅದರದೇ ಮೌಲ್ಯ, ಪರಂಪರೆ, ಸಂಪ್ರದಾಯವಿದೆ. ಅದೇ ರೀತಿ ಕೃಷಿಗೂ ತನ್ನದೇ ಆದ ಪರಂಪರೆ ಸಂಪ್ರದಾಯವಿದೆ. ಚಿತ್ರ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ.
___
Be the first to comment