ಮಾತಿನಮನೆ ಯಲ್ಲಿ ‘ಕಸ್ತೂರಿ ಮಹಲ್’

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ಅವರ ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋ ದಲ್ಲಿ ಮಾತಿನ‌ ಜೋಡಣೆ ನಡೆಯುತ್ತಿದೆ. ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.
ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ

ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ .ಪಿ.ಕೆ.ಹೆಚ್ ದಾಸ್* ಛಾಯಾಗ್ರಹಣ ಹಾಗೂ *ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್ ಗಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!