OTT ZEE5 ನಲ್ಲಿ ಕಾಟೇರ ರಿಲೀಸ್‌

ಡಿ-ಬಾಸ್ ದರ್ಶನ್ ಅವರ ಕಾಟೇರ ಫೆಬ್ರವರಿ 9 ರಂದು OTT ZEE5 ನಲ್ಲಿ ಬಿಡುಗಡೆಯಾಗಲಿದೆ.

ಡಿಸೆಂಬರ್ 29 ರಂದು ಬಿಡುಗಡೆಯಾಗಿದ್ದ ಕಾಟೇರ ಚಿತ್ರ 200 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈಗ ಈ ಸಿನಿಮಾ OTT ವೇದಿಕೆಗೂ ಕಾಲಿಡಲು ರೆಡಿಯಾಗಿದೆ.

ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಅದ್ಧೂರಿಯಾಗಿ ರಿಲೀಸ್ ಆಗಿದೆ. ಸಲಾರ್ ಗೆ ಪೈಪೋಟಿ ನೀಡಿರುವ ಈ ಚಿತ್ರವನ್ನು ಥಿಯೇಟರ್‌ನಲ್ಲಷ್ಟೇ ಅಲ್ಲದೇ ಸಣ್ಣ ಪರದೆಯಲ್ಲೂ ನೋಡಲು ಸಾಕಷ್ಟು ಪ್ರೇಕ್ಷಕರು ಕಾಯುತ್ತಿದ್ದಾರೆ.

ತರುಣ್ ಸುಧೀರ್ ನಿರ್ದೇಶಿಸಿರುವ ಈ ಸಿನಿಮಾ ಥಿಯೇಟರ್ ನಲ್ಲಿ ಧೂಳೆಬ್ಬಿಸಿರುವ ಹಾಗೇ ಒಟಿಟಿಯಲ್ಲಿ ಎಷ್ಟರ ಮಟ್ಟಿಗೆ ಸೆನ್ಸೇಷನ್ ಕ್ರಿಯೇಟ್ ಮಾಡುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ರೈತರ ಮನಸ್ಸು ಗೆದ್ದಿದೆ. ಮಾಲಾಶ್ರೀ ಪುತ್ರಿ ಆರಾಧನಾ ಕಾಟೇರ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದು ಮೊದಲ ಚಿತ್ರದಲ್ಲೇ ಭರ್ಜರಿ ಯಶಸ್ಸು ಸಿಕ್ಕಿದೆ.

6 ನೇ ವಾರಕ್ಕೆ ಕಾಲಿಟ್ಟಿರೋ ಕಾಟೇರ ಸಿನಿಮಾ ಸಿಂಗಲ್ ಥಿಯೇಟರ್‌, ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!