‘ಕೆಡಿ’ ಉತ್ತಮ ಕಲೆಕ್ಷನ್

‘ಕೆಡಿ’ ಚಿತ್ರ ಬಿಡುಗಡೆಯಾದ ಮೊದಲ ದಿನ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿರುವ ಮಾಹಿತಿ ಬಂದಿದೆ.

ಸ್ಯಾಕ್‌ನಿಲ್ಕ್ ವರದಿಗಳ ಪ್ರಕಾರ ಈ ಸಿನಿಮಾ ಮೊದಲ ದಿನ ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 3.50 ಕೋಟಿ ರೂಪಾಯಿ ನಿವ್ವಳ ಗಳಿಕೆ ದಾಖಲಿಸಿದೆ.

ದೇಶಾದ್ಯಂತ ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರ, ಆರಂಭಿಕ ಹಂತದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪ್ರಭಾವವನ್ನು ಬೀರಲು ಮುಂದಾಗಿದೆ. ಚಿತ್ರದ ಒಟ್ಟಾರೆ ಗ್ರಾಸ್ ಗಳಿಕೆ 4.10 ಕೋಟಿ ರೂಪಾಯಿಗಳ ಆಸುಪಾಸಿನಲ್ಲಿದೆ ಎಂದು ಹೇಳಲಾಗಿದೆ.

ಜೋಗಿ ಪ್ರೇಮ್ ಈ ಚಿತ್ರದಲ್ಲಿ 80ರ ದಶಕದ ಬೆಂಗಳೂರನ್ನು ತೆರೆಯ ಮೇಲೆ ಮರು ಸೃಷ್ಟಿಸಿದ್ದಾರೆ. ಧ್ರುವ ಸರ್ಜಾ ಅವರು ಕಾಳಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯ ಮತ್ತು ರೆಟ್ರೋ ಶೈಲಿಯ ಗೆಟಪ್ ಅಭಿಮಾನಿಗಳಿಗೆ ಹೊಸ ಟ್ರೀಟ್ ನೀಡಿದೆ.

ಸಂಜಯ್ ದತ್ ಅಭಿನಯ ಪರಭಾಷೆಯ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ಅವರ ವಿಶೇಷ ಪಾತ್ರ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ರವಿಚಂದ್ರನ್, ರಮೇಶ್ ಅರವಿಂದ್, ಶಿಲ್ಪಾ ಶೆಟ್ಟಿ ಮತ್ತು ಪಿ ರವಿಶಂಕರ್ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ರೀಷ್ಮಾ ನಾಣಯ್ಯ ಅವರ ಭರ್ಜರಿ ಡ್ಯಾನ್ಸ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ರಜೆ ಇರುವುದರಿಂದ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!