ಕೆಡಿ

ಏಪ್ರಿಲ್ 30ಕ್ಕೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರ ತೆರೆಗೆ

ಧ್ರುವ ಸರ್ಜಾ ನಟನೆಯ ಕೆಡಿ ಚಿತ್ರ ಏಪ್ರಿಲ್ 30 ರಂದು ದೇಶಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಈ ಚಿತ್ರವನ್ನು ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಈ ಪ್ಯಾನ್ ಇಂಡಿಯಾ ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಹಲವು ನೂರು ಕೋಟಿ ರೂಪಾಯಿ ಬಜೆಟ್ ನಲ್ಲಿ ನಿರ್ಮಿಸಿದೆ.

ಈಗಾಗಲೇ ಕೆಡಿ ಚಿತ್ರದ ಶಿವ ಶಿವ ಹಾಡಿನ ಲಿರಿಕಲ್ ವಿಡಿಯೋ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ಪ್ರೇಮ್ ಹಾಗೂ ಕೈಲಾಶ್ ಖೇರ್ ಅವರು ಕನ್ನಡ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು, ತಮಿಳು, ಮಲೆಯಾಳಂ ಭಾಷೆಗಳಲ್ಲಿ ಆಯಾ ಭಾಗದ ಹಾಡುಗಾರರು ಧ್ವನಿ ನೀಡಿದ್ದಾರೆ.

ಮಾರ್ಚ್ 10ರಂದು ಸಂಜೆ 5:05 ಗಂಟೆಗೆ ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಸಿನಿಮಾದಲ್ಲಿ ಒಟ್ಟು 6 ಹಾಡು ಇದ್ದು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. 6 ಹಾಡುಗಳಿಗೆ 6 ಜನ ಕೊರಿಯೋಗ್ರಾಫರ್ ಕೆಲಸ ಮಾಡಿದ್ದಾರೆ.

ಕೆಡಿ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಚಿತ್ರ 70ರ ದಶಕದ ಗ್ಯಾಂಗ್ ಸ್ಟರ್ ಕಥೆಯನ್ನು ಹೊಂದಿದೆ. ಚಿತ್ರದ ಚಿತ್ರೀಕರಣಕ್ಕಾಗಿ 20 ಎಕರೆ ಪ್ರದೇಶದಲ್ಲಿ ವಿಶಾಲವಾದ ಸೆಟ್ ಹಾಕಿರುವುದು ವಿಶೇಷ ಆಗಿದೆ.

ಚಿತ್ರದಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಶಿಲ್ಪಾ ಶೆಟ್ಟಿ, ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಹೆಸರಾಂತ ಕಲಾವಿದರು ಕಾಣಿಸಿಕೊಂಡಿದ್ದಾರೆ.

ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್ ಅವರು ಕ್ಯಾಮರಾ ಕೆಲಸ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!