KD: ರವಿಚಂದ್ರನ್ ಲುಕ್ ಬಿಡುಗಡೆ

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಲುಕ್ ನ್ನು ಕೆಡಿ ಚಿತ್ರತಂಡ ಬಿಡುಗಡೆ ಮಾಡಿದೆ.

ರವಿಚಂದ್ರನ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರಕಂಡ ಲುಕ್ ಬಿಡುಗಡೆ ಮಾಡಿದೆ. ರವಿಚಂದ್ರನ್ ಅವರು ಕೋಟ್ ಹಾಕಿಕೊಂಡು ಜಬರ್ ದಸ್ತ್ ಆಗಿ ಕಾಣಿಸಿಕೊಂಡಿದ್ದಾರೆ.

ರವಿಚಂದ್ರನ್ ಅವರು ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದು, ಕಿರು ತೆರೆಯಲ್ಲಿ ಬೇಡಿಕೆಯನ್ನು ಹೊಂದಿದ್ದಾರೆ. ಸದ್ಯ ರವಿಚಂದ್ರನ್ ಅವರು ಕೆಡಿ ಚಿತ್ರ ಅಲ್ಲದೇ ದಿ ಜಡ್ಜ್ ಮೆಂಟ್ ಚಿತ್ರದಲ್ಲೂ ನಟಿಸುತ್ತಿದ್ದಾರೆ.

ದಿ ಜಡ್ಜ್ ಮೆಂಟ್ ಚಿತ್ರದಲ್ಲಿ ದಿಗಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಧನ್ಯಾ ರಾಮ್ ಕುಮಾರ್ ಅವರು ಅಭಿನಯಿಸಿದ್ದಾರೆ.

ಈ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರವನ್ನು ಗುರುರಾಜ್ ಕುಲಕರ್ಣಿ ಅವರು ನಿರ್ದೇಶನ ಮಾಡುತ್ತಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!