ಧ್ರುವ ಸರ್ಜಾ ನಟನೆಯ ಬಹು ನಿರೀಕ್ಷಿತ ‘ಕೆಡಿ’ ಸಿನಿಮಾ 2026ರ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.
‘ಕೆಡಿ’ ಚಿತ್ರದ ‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡನ್ನು ಬಿಡುಗಡೆ ಮಾಡುವ ಮೂಲಕ ಪ್ರೇಮ್ ಅವರು ಚಿತ್ರದ ಬಿಡುಗಡೆ ದಿನಾಂಕ ಬಹಿರಂಗಪಡಿಸಿದ್ದಾರೆ.
‘ಮಾರ್ಟಿನ್’ ಚಿತ್ರದ ಬಳಿಕ ಧ್ರುವ ಸರ್ಜಾ ನಟನೆಯ ಸಿನಿಮಾ ಬಿಡುಗಡೆಯಾಗುತ್ತಿರುವ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇದೆ. ಮಾರ್ಚ್ ತಿಂಗಳಲ್ಲಿ ಹಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ವೇಳೆಗೆ ‘ಕೆಡಿ’ಗೆ ದೊಡ್ಡ ಮಟ್ಟದ ಕ್ಲ್ಯಾಶ್ ಎದುರಾಗುವ ಲಕ್ಷಣಗಳು ಇಲ್ಲ. ಶಾಲಾ ಮಕ್ಕಳಿಗೆ ರಜೆ ಇರುವುದರಿಂದ ಸಿನಿಮಾ ಗಳಿಕೆಗೆ ಸಹಕಾರ ಸಿಗುವ ನಿರೀಕ್ಷೆ ಇದೆ.
ಇತ್ತೀಚೆಗೆ ಬಿಡುಗಡೆಯಾದ ‘ಕೆಡಿ’ ಚಿತ್ರದ ‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡಿಗೆ ಜೋಗಿ ಪ್ರೇಮ್ ಧ್ವನಿ ನೀಡಿದ್ದಾರೆ. ಬಿಎಸ್ ಮಂಜುನಾಥ್ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನಲ್ಲಿ ಧ್ರುವ ಸರ್ಜಾ, ರಮೇಶ್ ಅರವಿಂದ್ , ಸಂಜಯ್ ದತ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಗೆಳೆತನದ ಕುರಿತಾದ ಈ ಗೀತೆ ಗಮನ ಸೆಳೆಯುತ್ತಿದೆ.
—–





Be the first to comment