ಧ್ರುವ ಸರ್ಜಾ ನಟನೆಯ ‘ಕೆಡಿ – ದಿ ಡೆವಿಲ್’ ಸಿನಿಮಾ ವಿಶ್ವದಾದ್ಯಂತ 24.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
‘ಕೆಡಿ – ದಿ ಡೆವಿಲ್’ ಜೂನ್ 5 ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಕ್ತಾಯ ಹಂತಕ್ಕೆ ಬಂದಿದ್ದು, ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಗಳಿಕೆ ಮಾಡಿದೆ.
100 ಕೋಟಿ ಬಜೆಟ್‌ನ ಈ ಸಿನಿಮಾ ವಿಶ್ವದಾದ್ಯಂತ ಒಟ್ಟು 13,358 ಶೋ ಪ್ರದರ್ಶನ ಕಂಡಿದೆ. ಚಿತ್ರದ ನೆಟ್ ಕಲೆಕ್ಷನ್ ಒಟ್ಟು 21.39 ಕೋಟಿ ಆಗಿದೆ. ಮೇ 31ರ ಭಾನುವಾರ ಈ ಸಿನಿಮಾ ಕೇವಲ 7 ಲಕ್ಷ ರೂಪಾಯಿ ಗಳಿಸಿದೆ. ಈ ಸಿನಿಮಾ ಒಟಿಟಿಗೆ ಬರುತ್ತಿರುವುದರಿಂದ ಸಿನಿಮಾದ ಗಳಿಕೆ ಬಹುತೇಕ ಕೊನೆಗೊಂಡಂತೆ ಆಗಿದೆ.
‘ಕೆಡಿ – ದಿ ಡೆವಿಲ್’ ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದಾರೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿ ಅಬ್ಬರಿಸಿದ್ದಾರೆ. ಬಾಲಿವುಡ್ ಸ್ಟಾರ್ ಸಂಜಯ್ ದತ್ ಖಳನಾಯಕನಾಗಿ ನಟಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್, ಶಿಲ್ಪಾ ಶೆಟ್ಟಿ, ರೇಷ್ಮಾ ನಾಣಯ್ಯ, ರಮೇಶ್ ಅರವಿಂದ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ಕೆಡಿ – ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಕೆಟ್ಟ ಸಾಹಿತ್ಯದ ಕಾರಣಕ್ಕೆ ವಿವಾದ ಮಾಡಿಕೊಂಡಿತು. ಟ್ರೈಲರ್ನಲ್ಲಿರುವ ವಿಪರೀತ ರಕ್ತಪಾತ ಹಾಗೂ ಹಿಂಸಾಚಾರದ ದೃಶ್ಯಗಳ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆದಿದ್ದವು.
—–





Be the first to comment