ಧ್ರುವ ಸರ್ಜಾ ನಟನೆಯ ‘ಕೆಡಿ’ ದಿ ಡೆವಿಲ್ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ರಿಲೀಸ್ ಮಾಡಲಾಗಿದೆ.
ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಟ್ರೇಲರ್ ಮೂಲಕ ಗೊತ್ತಾಗಿದೆ. ರೆಟ್ರೋ ಕಾಲದ ಕಥೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ. ಆ ಕಾಲಘಟ್ಟಕ್ಕೆ ತಕ್ಕಂತೆ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ಮಾಡಲಾಗಿದೆ. ಒಟ್ಟಾರೆ ಅದ್ದೂರಿಯಾಗಿ ಸಿನಿಮಾ ಮೂಡಿ ಬಂದಿದೆ. ಮಂಡ್ಯ ಸ್ಲ್ಯಾಂಗ್, ರೆಟ್ರೋ ಅಂಡರ್ ವರ್ಲ್ಡ್ ಕಥೆ ಇಲ್ಲಿದೆ.
ಟ್ರೇಲರ್ ಬಿಡುಗಡೆ ವೇಳೆ ಧ್ರುವ ಸರ್ಜಾ ಮಾತನಾಡಿ, ‘ಇದು ಫ್ಯಾಮಿಲಿ ಎಂಟರ್ಟೇನರ್ ಸಿನಿಮಾ. ಸ್ವಲ್ಪ ಕ್ರೌರ್ಯ ಇದೆ. ಏಪ್ರಿಲ್ 30ರಂದು ನಿಮ್ಮನ್ನು ನಂಬಿಕೊಂಡೇ ನಿಮ್ಮ ಮುಂದೆ ಬರುತ್ತಿದ್ದೇವೆ. ಈ ಚಿತ್ರದ ಹೀರೋ ನಾನಲ್ಲ. ನಮ್ಮ ನಿರ್ದೇಶಕರು. ಅವರು ಈ ಚಿತ್ರಕ್ಕೆ ಎಷ್ಟು ಕಷ್ಟಪಟ್ಟಿದ್ದಾರೆ ಎಂಬುದು ಸಿನಿಮಾ ನೋಡಿದರೆ ನಿಮಗೆ ತಿಳಿಯುತ್ತದೆ’ ಎಂದು ಹೇಳಿದರು.
ಪ್ರೇಮ್ ನಿರ್ದೇಶನದ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ಈ ಚಿತ್ರ ಕನ್ನಡ, ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಏಪ್ರಿಲ್ 30ರಂದು ಏಕಕಾಲದಲ್ಲಿ ತೆರೆ ಕಾಣುತ್ತಿದೆ.
ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ.
ರವಿಶಂಕರ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.





Be the first to comment