ಕೃಷ್ಣ ಟಾಕೀಸ್ ಈ ವಾರ ತೆರೆಗೆ

ಅಜೇಯ್ ರಾವ್ ನಾಯಕನಾಗಿ ನಟಿಸಿರುವ ಕೃಷ್ಣ ಟಾಕೀಸ್ ಚಿತ್ರ ಈ ವಾರ ತೆರೆಗೆ ಬರುತ್ತಿದೆ.ಗೋಕುಲ್ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದ ರಾಜು ಎ.ಹೆಚ್ ನಿರ್ಮಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಲಿರಿಕಲ್ ವಿಡಿಯೋ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದ್ದು, ಚಿತ್ರರಸಿಕರಿಂದ ಮೆಚ್ಚುಗೆ ಪಡೆದಿದೆ.

ವಿಜಯಾನಂದ್ ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮದ ಸಂಗೀತ ನೀಡಿದ್ದಾರೆ. ‌ಅಭಿಷೇಕ್ ಕಾಸರಗೋಡು ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನಿರಂತ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಅಜೇಯ್ ರಾವ್, ಅಪೂರ್ವ, ಸಿಂಧು ಲೋಕನಾಥ್, ಚಿಕ್ಕಣ್ಣ, ಮಂಡ್ಯ‌ ರಮೇಶ್, ಶೋಭ್ ರಾಜ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ…

Be the first to comment

Leave a Reply

Your email address will not be published. Required fields are marked *

Translate »
error: Content is protected !!