‘ನೆನಪಿರಲಿ’ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ, ದೂರದೃಷ್ಟಿ ಮತ್ತು ಪರಂಪರೆಯನ್ನು ಆಧರಿಸಿದ ‘ಕೆಂಪಾಂಬುಧಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಜಾಣಗೆರೆ ವೆಂಕಟರಾಮಯ್ಯ ಅವರ ಜನಪ್ರಿಯ ಕಾದಂಬರಿಯನ್ನು ಆಧರಿಸಿ ಸಿನಿಮಾ ನಿರ್ಮಾಣವಾಗಿದೆ. ಇತಿಹಾಸ, ಜನಪದ, ದಂತಕಥೆ ಹಾಗೂ ಸಾಂಸ್ಕೃತಿಕ ನೆನಪುಗಳನ್ನು ಒಟ್ಟುಗೂಡಿಸಿ ಕೆಂಪೇಗೌಡರ ದೂರದೃಷ್ಟಿಯ ಆಡಳಿತ ಮತ್ತು ಪರಿಸರ ಕಾಳಜಿಯನ್ನು ತೆರೆ ಮೇಲೆ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.
ರಮೇಶ್ ಬೇಗಾರ್ ನಿರ್ದೇಶನದಲ್ಲಿ ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಮ್ಯೂಸಿಕ್’ ಸಹಯೋಗ ನೀಡಿದೆ. ಚಿತ್ರದಲ್ಲಿ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್, ರಮೇಶ್ ಪಂಡಿತ್, ನಟರಾಜ್ ರಾವ್, ಬಿ.ಎಲ್. ರವಿಕುಮಾರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರತಂಡದ ಪ್ರಕಾರ ‘ಕೆಂಪಾಂಬುಧಿ’ ಕೇವಲ ಐತಿಹಾಸಿಕ ಸಿನಿಮಾ ಅಲ್ಲ. ಹಳೆಯ ಹಾಗೂ ಇಂದಿನ ಬೆಂಗಳೂರನ್ನು ಜೋಡಿಸುವ ಕಥೆಯಾಗಿದೆ. ಕೆಂಪೇಗೌಡರ ಐತಿಹಾಸಿಕ ಕೊಡುಗೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಈ ಚಿತ್ರಕ್ಕೆ ಕೈಜೋಡಿಸಿರುವುದು ಹೆಮ್ಮೆಯ ವಿಷಯ ಎಂದು ಹೊಂಬಾಳೆ ಫಿಲ್ಮ್ಸ್ ಸ್ಥಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.
—-





Be the first to comment