“ನಾಡಪ್ರಭು ಕೆಂಪೇಗೌಡ” ಕುರಿತ ಚಲನಚಿತ್ರ ನಿರ್ಮಾಣ ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಬೆಂಗಳೂರು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ ನಿರ್ದೇಶನದಲ್ಲಿ ಕೆಂಪೇಗೌಡ ಸಿನಿಮಾ ಮೂಡಿ ಬರಲಿದೆ.. ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿದ್ದು, ಪೂರ್ವಸಿದ್ಧತೆಗಳು ಭರದಿಂದ ಸಾಗಿದೆ.
Be the first to comment