ಡಿ ಬೀಟ್ಸ್ ಗೆ ‘ಕೆಂಡ’ ಆಡಿಯೋ ರೈಟ್ಸ್

ಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕೆಂಡ’ ಚಿತ್ರದ ಆಡಿಯೋ ರೈಟ್ಸ್ ನ್ನು ಡಿ ಬೀಟ್ಸ್ ಪಡೆದುಕೊಂಡಿದೆ.

ಮ್ಯೂಸಿಕ್ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಸಂಸ್ಥೆ ಡಿ ಬೀಟ್ಸ್ ಸಂಗೀತ ನಿರ್ದೇಶಕ ಕಂ ಈ ಸಂಸ್ಥೆಯ ಮುಖ್ಯಸ್ಥ ವಿ. ಹರಿಕೃಷ್ಣ ಅವರೇ ಕೆಂಡದ ಹಾಡುಗಳನ್ನು ಮೆಚ್ಚಿಕೊಂಡು ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾರೆ. ಹರಿಕೃಷ್ಣ ಅವರ ಕಡೆಯಿಂದ ಬಂದಿರುವ ಮೆಚ್ಚುಗೆಯ ಮಾತುಗಳು ಚಿತ್ರತಂಡಕ್ಕೆ ಹುರುಪು ತುಂಬಿವೆ.

‘ಕೆಂಡ’ ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಅದರಲ್ಲೊಂದು ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ. ಅದಿತಿ ಸಾಗರ್  ಹಾಡೊಂದಕ್ಕೆ ಧ್ವನಿಯಾಗಿದ್ದಾರೆ.

 ‘ಕೆಂಡ’ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣದ  ಸಿನಿಮಾ ‘ಕೆಂಡ’ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಕೆಲದಿನಗಳಲ್ಲಿ ನೀಡಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!